ಮಂಗಳೂರು:17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೀಕ್ಷಕರನ್ನು ನಿಯೋಜನೆ ಮಾಡಿದೆ. 17- ದಕ್ಷಿಣ ಕನ್ನಡ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಐಎಎಸ್ ಅಧಿಕಾರಿ ಆಕಾಂಕ್ಷ ರಂಜನ್ ಅವರು ಏ.3ರಂದು ಜಿಲ್ಲೆಗೆ ಆಗಮಿಸಿದ್ದಾರೆ.ಚುನಾವಣಾ
ಸಾಮಾನ್ಯ ವೀಕ್ಷಕರು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ಇಡಲಿದ್ದಾರೆ.ಸಾಮಾನ್ಯ ವೀಕ್ಷಕರಾದ ಆಕಾಂಕ್ಷ ರಂಜನ್ ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿರುವ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ಹಾಗೂ ಸಾಮಾಜಿಕ ಜಾಲತಾಣ ನಿರ್ವಹಣಾ ಸಮಿತಿಗೆ ಕಚೇರಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿ, ಕೆಲವು ಸಲಹೆ ಸೂಚನೆಗಳನ್ನು ನೀಡಿದರು. ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.