ಮಂಗಳೂರು:ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗೇರು ಅಥವಾ ಗೋಡಂಬಿಯನ್ನು ಬೆಳೆಯಲು ವಿಪುಲ ಅವಕಾಶವಿದ್ದು, ಗೇರು ಅಭಿವೃದ್ಧಿ ನಿಗಮದ ವತಿಯಿಂದ ಗುಣಮಟ್ಟದ ಗೋಡಂಬಿ ಸಸಿಗಳನ್ನು ಬೆಳೆಸಿ, ರೈತರಿಗೆ ನೀಡಲಾಗುವುದು. ಇದಕ್ಕಾಗಿ 1 ಕೋಟಿ ರೂ. ಅನುದಾನ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದರು.ಗೇರು ಅಭಿವೃದ್ಧಿ ಮಂಡಳಿ ವತಿಯಿಂದ
ಮಂಗಳೂರಿನಲ್ಲಿ ಆಯೋಜಿಸಿರುವ ಗೇರು ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,ಆಸಕ್ತ ರೈತರಿಗೆ ಸಸಿಗಳನ್ನು ನಿಗಮದ ನರ್ಸರಿಗಳಲ್ಲಿಯೇ ಬೆಳೆಸಿ,ಪೂರೈಸುವುದು ಸೂಕ್ತ ಎಂದು ಪರಿಗಣಿಸಿ, ಈ ವರ್ಷದಿಂದಲೇ ಕಸಿ ಮಾಡಿದ ಗೋಡಂಬಿ ಸಸಿ ಬೆಳೆಸಲು ಸೂಚನೆ ನೀಡಲಾಗಿದೆ. ಇದಕ್ಕಾಗಿ 1 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು. ಸಸಿಗಳನ್ನು ಬೆಳೆಸಿ ಮುಂದಿನ ವರ್ಷದಿಂದ ಸಬ್ಸಡಿ ದರದಲ್ಲಿ
ರೈತರಿಗೆ ಈ ಸಸಿಗಳನ್ನು ಮಾರಾಟ ಮಾಡಲಾಗುವುದು ಎಂದು ತಿಳಿಸಿದರು.ಕರ್ನಾಟಕವನ್ನು ಗೇರು ಕ್ಷೇತ್ರದಲ್ಲಿ ಸ್ವಾವಲಲಂಬಿಯನ್ನಾಗಿ ಮಾಡಲಾಗುವುದು ಎಂದರು.ಶಾಸಕ ವೇದವ್ಯಾಸ ಕಾಮತ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶಾಸಕರುಗಳಾದ ರಾಜೇಗೌಡ, ಅಶೋಕ್ ಕುಮಾರ್ ರೈ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್. ಗಟ್ಟಿ, ಮಾಜಿ ಸಚಿವ ರಮಾನಾಥ ರೈ ಮತ್ತಿತರರು ಪಾಲ್ಗೊಂಡಿದ್ದರು.














