ಸುಳ್ಯ: ಸುಳ್ಯ ಕೊಡಿಯಾಲಬೈಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಹಾಗೂ ನೂತನ ಪ್ರಯೋಗಾಲಯದ ಉದ್ಘಾಟನೆ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ನೂತನ ಪ್ರಯೋಗಾಲಯ
ಉದ್ಘಾಟಿಸಿದರು. ಬಳಿಕ 2022-23ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಯೋಗಾಲಯ ಸೇರಿದಂತೆ ಸರಕಾರದಿಂದ ನೀಡುವ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳಳು ಸದುಪಯೋಗಪಡಿಸಿ ಕೊಳ್ಳಬೇಕು. ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಯಶಸ್ಸಿನ ಮೆಟ್ಟಿಲೇರಬೇಕು ಎಂದು ಅವರು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಸತೀಶ್ಕುಮಾರ್ ಕೊಯಿಂಗಾಜೆ, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.