ಸುಳ್ಯ: ಪ್ರಗತಿಪರ ಕೃಷಿಕರು ಹಾಗೂ ಸಾಮಾಜಿಕ,ಧಾರ್ಮಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದ ಗಿರಿಜಾಶಂಕರ ತುದಿಯಡ್ಕ(63) ನಿಧನರಾಗಿದ್ದಾರೆ.ಮಿದುಳಿನ ರಕ್ತಸ್ರಾವಕ್ಕೊಳಪಟ್ಟು
ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಇಂದು ರಾತ್ರಿ ನಿಧನರಾದರು.ಡಿ.29 ರಂದು ಸಂಜೆ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ
ಆಸ್ಪತ್ರೆಯಲ್ಲಿ ಇಂದು ರಾತ್ರಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಗಿರಿಜಾಶಂಕರ ತುದಿಯಡ್ಕ, ರೋಟರಿ ಚಾರಿಟೇಬಲ್ ಟ್ರಸ್ಟ್ನ ಟ್ರಸ್ಟಿಯಾಗಿ, ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು. ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದರು.
ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ.ತುದಿಯಡ್ಕ ವಿಷ್ಣಯ್ಯ ಅವರ ಪುತ್ರರಾದ ಗಿರಿಜಾ ಶಂಕರ ತುದಿಯಡ್ಕ ಈಗಿನ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಅವರ ಸಹೋದರ.ಮೃತರು ಪತ್ನಿ, ಇಬ್ಬರು ಪುತ್ರರು,ಓರ್ವ ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.