ಸುಳ್ಯ:ಅಗಲಿದ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮದ ಪೂರ್ವಭಾವಿ ಸಭೆ ವರ್ತಕರ ಸಮುದಾಯ ಭವನದಲ್ಲಿ ನಡೆಯಿತು. ಜುಲೈ 20ರಂದು ಪೂ.10.30ಕ್ಕೆ ಕುಂಭಕ್ಕೋಡು ಕಸ್ತೂರಿ ಅಚ್ಚುತ ಭಟ್ ಸಭಾಭವನದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.ವರ್ತಕರ ಸಂಘದ
ಗೌರವಾಧ್ಯಕ್ಷ ಪಿ.ಬಿ.ಸುಧಾಕರ ರೈ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಹಾಗು ಸಾರ್ವಜನಿಕರ ಪಾಲ್ಗೊಳ್ಳುವಿಕೆಯೊಂದಿಕೆ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್, ವರ್ತಕರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಜನತಾ, ಪ್ರಮುಖರಾದ ವೀರಪ್ಪ ಗೌಡ ಕಣ್ಕಲ್, ಪ್ರಭಾಕರನ್ ನಾಯರ್ ಸ್ವಾಗತ್, ರಮೇಶ್ ರೈ, ಅಬ್ದುಲ್ ಮಜೀದ್ ಜನತಾ, ಪ್ರಕಾಶ್ ಮೂಡಿತ್ತಾಯ, ರಂಜಿತ್ ಎನ್.ಆರ್.ಜನಾರ್ಧನ ನಾಯ್ಕ್, ಎ.ಬಿ.ಇಬ್ರಾಹಿಂ, ನಾಗವೇಣಿ ಮತ್ತಿತರರು ಉಪಸ್ಥಿತರಿದ್ದರು.







