ಸುಳ್ಯ:ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರದ್ವಾಜ್(76) ಅವರು ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಕೆಲವು ದಿನಗಳಿಂದ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ
ನಿಧನರಾದರು ಎಂದು ತಿಳಿದು ಬಂದಿದೆ. ದೇಶದಾದ್ಯಂತ 140 ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸುವ ತೂಗು ಸೇತುವೆಗಳ ಸರದಾರ ಎಂದು ಹೆಸರು ಮಾಡಿದ್ದರು. 2017ರಲ್ಲಿ ದೇಶ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಇಂಜಿನಿಯರ್ ಪದವಿ ಪಡೆದ ಬಳಿಕ ಆಯಶ್ಯಿಲ್ಪ ಇಂಜಿನಿಯರಿಂಗ್ ವರ್ಕ್ಸ್ ಆರಂಭಿಸಿದ್ದ ಭಾರದ್ವಾಜ್ ಅವರು ಬಳಿಕ ತೂಗುಸೇತುವೆ ನಿರ್ಮಾಣ ಆರಂಭಿಸಿ ದೇಶ ವಿದೇಶಗಳಲ್ಲಿ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಪ್ರಸಿದ್ಧರಾಗಿದ್ದರು. ಪತ್ನಿ ದಿ.ಉಷಾ. ಪುತ್ರರಾದ ಸುದರ್ಶನ್, ಪತಂಜಲಿ, ಪುತ್ರಿ ರಷ್ಯಾ ಹಾಗು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.







