ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಏ.21 ರಂದು ಕ್ಷೇತ್ರದ ವಿವಿಧ ಕಡೆಗಳಲ್ಲಿ ಭೇಟಿ ನೀಡಿ ಚುನಾವಣಾ ಪ್ರಚಾರ ಕೈಗೊಂಡರು.ನಿಂತಿಕಲ್ಲು ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ವತಿಯಿಂದ

ಐನಕಿದುವಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಚುನಾವಣಾ ಪ್ರಚಾರ ಕೈಗೊಂಡರು.ಸುಬ್ರಹ್ಮಣ್ಯದ ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಹರಿಹರ ಪಲ್ಲತ್ತಡ್ಕ ಗ್ರಾಮ ಸಮಿತಿ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೊಲ್ಲಮೊಗ್ರ ಮಯೂರ ಕಲಾ ಮಂದಿರದಲ್ಲಿ ನಡೆದ ಸಭೆಯಲ್ಲಿ
ಭಾಗವಹಿಸಿದ ಜಿ.ಕೃಷ್ಣಪ್ಪ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಲ್ಮಕ್ಕಾರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಅವರು ಅಲ್ಲಿ ಚುನಾವಣಾ ಪ್ರಚಾರ ಕೈಗೊಂಡರು.ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅಭ್ಯರ್ಥಿಯ ಜೊತೆಯಲ್ಲಿದ್ದರು.