ಸುಳ್ಯ: ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಗೋಕುಲ್ದಾಸ್ ಅಭಿನಂದನಾ ಸಮಿತಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯದಲ್ಲಿ ಕಳೆದ 40 ವರ್ಷಗಳಿಂದ ಸಾರ್ವಜನಿಕ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಈ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಕೆ.ಗೋಕುಲ್ದಾಸ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಡಿ.28ರಂದು ಶನಿವಾರ ಪೂ.10.30ರಿಂದ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿದೆ ಎಂದು
ಸಾರ್ವಜನಿಕ ಅಭಿನಂದನಾ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 40 ವರ್ಷಗಳಿಂದ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಕ್ರೀಡಾ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿರುವ ಗೋಕುಲ್ದಾಸ್ ಅವರಿಗೆ ಅರ್ಹವಾಗಿಯೇ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ. ಈ ಹಿನ್ನಲೆಯಲ್ಲಿ ಗೋಕುಲ್ದಾಸ್ ಅವರನ್ನು ಸಾರ್ವಜನಿಕವಾಗಿ ಅಭಿನಂದಿಸಲು ನಿರ್ಧರಿಸಲಾಗಿದೆ. ಅಭಿನಂದನಾ ಸಮಾರಂಭವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕರಾದ ಸಹಕಾರ ರತ್ನ ಸೀತಾರಾಮ ರೈ ಸವಣೂರು ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಅಭಿನಂದನಾ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ
ಮುಖ್ಯ ಅತಿಥಿಗಳಾಗಿ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಎಸ್.ಅಂಗಾರ, ನ.ಪಂ.ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಭಾಗವಹಿಸಲಿದ್ದಾರೆ. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ ಅಭಿನಂದನಾ ಭಾಷಣ ಮಾಡುವರು. ಗೌರವ ಅತಿಥಿಗಳಾಗಿ ಉದ್ಯಮಿ ಹೆಚ್.ಎಂ.ನಂದಕುಮಾರ್, ಪ್ರಮುಖರಾದ ನಿತ್ಯಾನಂದ ಮುಂಡೋಡಿ, ಎಂ.ಬಿ.ಸದಾಶಿವ, ಪಿ.ಸಿ.ಜಯರಾಮ, ಅಕ್ಷಯ್ ಕೆ.ಸಿ, ಎನ್.ಎ.ರಾಮಚಂದ್ರ, ಎನ್.ಜಯಪ್ರಕಾಶ್ ರೈ, ಹರೀಶ್ ಕಂಜಿಪಿಲಿ, ಜಾಕೆ ಮಾಧವ ಗೌಡ, ಎಸ್.ಸಂಶುದ್ದೀನ್ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಅಭಿನಂದಿತರಿಗೆ ಹಾರಾರ್ಪಣೆಗೆ ಅವಕಾಶ ಇದೆ ಎಂದು ರಾಧಾಕೃಷ್ಣ ಬೊಳ್ಳೂರು ತಿಳಿಸಿದರು.ಅಭಿನಂದನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
ಸುದ್ದಿಗೋಷ್ಠಿಯಲ್ಲಿ ಅಭಿನಂದನಾ ಸಮಿತಿಯ ಉಪಾಧ್ಯಕ್ಷರಾದ ನಾರಾಯಣ ಕೇಕಡ್ಕ, ಎಸ್.ಸಂಶುದ್ದೀನ್, ತೀರ್ಥರಾಮ ಜಾಲ್ಸೂರು, ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.