ಸುಳ್ಯ: ಸುಳ್ಯದ ಕೆ.ಗೋಕುಲ್ದಾಸ್ ಅವರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು. ಸಮಾಸಮಾಜ ಸೇವಾ ವಿಭಾಗದಲ್ಲಿ
ಗೋಕುಲ್ದಾಸ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ಕೆ.ಗೋಕುಲ್ದಾಸ್ ಅವರು ಸಾಮಾಜಿಕ, ಧಾರ್ಮಿಕ, ರಾಜಕೀಯ, ಸಂಘಟನಾ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದಾರೆ.
ಸುಳ್ಯದ ಶಾರದಾಂಬ ಉತ್ಸವ (ಎಸ್.ಸಿಕ್ಸ್) ನಲ್ಲಿ ಕಳೆದ 50 ವರ್ಷಗಳಿಂದ ಗೋಕುಲ್ ದಾಸ್ ಮುಂಚೂಣಿಯಲ್ಲಿದ್ದಾರೆ. ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮತ್ತಿತರರು ಉಪಸ್ಥಿತರಿದ್ದರು