ಸುಳ್ಯ: ಸುಳ್ಯದ ಕೆ.ಗೋಕುಲ್ದಾಸ್ ಅವರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ಸಮಾಜ ಸೇವಾ ವಿಭಾಗದಲ್ಲಿ ಗೋಕುಲ್ದಾಸ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ಅ.31ರಂದು ರಾಜ್ಯೋತ್ಸವ ಪಟ್ಟಿ ಪ್ರಕಟಗೊಂಡಾಗ ಸುಳ್ಯದ ಯಾರೋಬ್ಬರ ಹೆಸರೂ ಪಟ್ಟಿಯಲ್ಲಿ ಇರಲಿಲ್ಲ. ಈ ಕುರಿತು ‘ಸುಳ್ಯ ಮಿರರ್’ ವರದಿ ಪ್ರಕಟಿಸಿತ್ತು. ಸುಳ್ಯವನ್ನು
ಕಡೆಗಣಿಸಿರುವ ಬಗ್ಗೆ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಸುಳ್ಯಕ್ಕೆ ಒಂದು ಪ್ರಶಸ್ತಿ ಘೋಷಣೆ ಮಾಡಿದೆ. ಜಿಲ್ಲೆಯಲ್ಲಿ ಒಟ್ಟ ಅಸಮಾಧಾನ ಉಂಟಾದ ಹಿನ್ನಲೆಯಲ್ಲಿ ಕೆಲವು ಹೆಸರುಗಳನ್ನು ಸೇರಿಸಿ ಪ್ರಶಸ್ತಿ ಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಕೆ.ಗೋಕುಲ್ದಾಸ್ ಅವರು ಸಾಮಾಜಿಕ, ಧಾರ್ಮಿಕ, ರಾಜಕೀಯ, ಸಂಘಟನಾ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದಾರೆ.
ಸುಳ್ಯದ ಶಾರದಾಂಬ ಉತ್ಸವ (ಎಸ್.ಸಿಕ್ಸ್) ನಲ್ಲಿ ಕಳೆದ 50 ವರ್ಷಗಳಿಂದ ಗೋಕುಲ್ ದಾಸ್ ಮುಂಚೂಣಿಯಲ್ಲಿದ್ದಾರೆ. ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ.