ಗೂನಡ್ಕ:ಬದ್ರಿಯಾ ಜುಮಾ ಮಸೀದಿ ಗೂನಡ್ಕದ ಹಿಮಾಯತುಲ್ ಇಸ್ಲಾಂ ಜಮಾಅತ್ ಈದ್ ಮಿಲಾದ್ ಸ್ವಾಗತ ಸಮಿತಿಯ ವತಿಯಿಂದ ನಡೆಯುತ್ತಿರುವ ಮೀಲಾದ್ ಫೆಸ್ಟ್, ಸರ್ವಧರ್ಮಿಯ ಸ್ನೇಹ ಸಮ್ಮಿಲನ ಹಾಗೂ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ದೊರಕಿತು. ಜಮಾಅತ್ ಅಧ್ಯಕ್ಷರಾದ ಡಿ.ಆರ್.ಅಬ್ದುಲ್ ಖಾದರ್ ಧ್ವಜಾರೋಹಣ ನೆರವೇರಿಸಿದರು. ಖತೀಬರಾದ ಮಹಮ್ಮದ್ ಅಲೀ ಸಖಾಫಿಯವರು ದುವಾ ನೆರವೇರಿಸಿದರು. ನಂತರ ಮದರಸಾ ವಿದ್ಯಾರ್ಥಿಗಳಿಂದ ಹಾಗೂ
ಜಮಾಅತ್ ಸದಸ್ಯರಿಂದ ಆಕರ್ಷಕ ಮಿಲಾದ್ ಜಾಥಾವು ಗೂನಡ್ಕದ ಮುಖ್ಯ ರಸ್ತೆಯಲ್ಲಿ ಜರುಗಿತು. ಸಂಜೆ ನಡೆದ ಮದರಸಾ ವಿದ್ಯಾರ್ಥಿಗಳ ಮಿಲಾದ್ ಫೆಸ್ಟ್ ಕಾರ್ಯಕ್ರಮವನ್ನು ಖತೀಬರಾದ ಮಹಮ್ಮದ್ ಅಲೀ ಸಖಾಫಿಯವರು ಉದ್ಘಾಟಿಸಿ ಚಾಲನೆ ನೀಡಿದರು.
ಈ ಸಂದರ್ಭ ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್ ಗೌರವಾಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ, ಜಮಾಅತಿನ
ಸದರ್ ಮುಅಲ್ಲಿಂ ಹಬೀಬ್ ಹಿಮಮಿ, ಜಮಾಅತಿನ ಪ್ರಧಾನ ಕಾರ್ಯದರ್ಶಿ ಉಮ್ಮರ್ ಪುತ್ರಿ, ಈದ್ ಮಿಲಾದ್ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎಸ್.ಎ.ಅಶ್ರಫ್ ದೊಡ್ಡಡ್ಕ, ಸಂಚಾಲಕರಾದ ಪಿ.ಕೆ.ಅಬೂಸಾಲಿ ಗೂನಡ್ಕ, ಶೌವಾದ್ ಗೂನಡ್ಕ, ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷರಾದ ಜಾಫರ್ ಸಾದಿಕ್ ಕುಂಭಕ್ಕೋಡ್, ಜಮಾಅತಿನ ಮಾಜಿ ಅಧ್ಯಕ್ಷರಾದ ಹಾಜಿ ಪಿ.ಎ.ಉಮ್ಮರ್ ಗೂನಡ್ಕ, ಹಾಜಿ ಅಬ್ದುಲ್ಲ ಕೊಪ್ಪದಕಜೆ, ಜಮಾಅತ್ ಸಮಿತಿಯ ಪದಾಧಿಕಾರಿಗಳು, ಅಧೀನ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜಮಾಅತಿನ ಗಲ್ಫ್ ದೇಶದ ಪ್ರತಿನಿಧಿಗಳು ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.
ಸೆಪ್ಟಂಬರ್ 29 ರಂದು ಸಂಜೆ ಸರ್ವಧರ್ಮಿಯರ ಸ್ನೇಹ ಸಮ್ಮಿಲನ ಜರುಗಲಿದ್ದು, ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಅಶೋಕ್ ಕುಮಾರ್ ರೈ ಹಾಗೂ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ಇನಾಯತ್ ಅಲೀ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.