ಸಂಪಾಜೆ: ಕಾರು ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರು ನುಚ್ಚು ನೂರಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ್ಯ ಪಾರಾದ ಘಟನೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಸಂಭವಿಸಿದೆ. ಮಡಿಕೇರಿ ಕಡೆಯಿಂದ ಬರುತ್ತಿದ್ದ

ಶಿಪ್ಟ್ ಕಾರು ಮತ್ತಿ ಸುಳ್ಯ ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ಮಧ್ಯೆ ಫೆ.4 ರಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನ ಇಂಜಿನ್ ಕಾರಿನಿಂದ ಬೇರ್ಪಟ್ಟು ದೂರಕ್ಕೆ ಎಸೆಯಲ್ಪಟ್ಟಿದೆ ಎಂದು ಹೇಳಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾಸರಗೋಡು ಮೂಲದ ಐದು ಮಂದಿ ಯುವಕರು ಪವಾಡ ಸದೃಶ್ಯ ಪಾರಾಗಿದ್ದಾರೆ.










