ಗೂನಡ್ಕ:ಕಾರು ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಬಾಲಕನೋರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಡೆದಿದೆ.ಇಂದು ಬೆಳ್ಳಂ ಬೆಳಗ್ಗೆ ಅಪಘಾತ ಸಂಭವಿಸಿದ್ದು
ಮಡಿಕೇರಿ ಕಡೆ ಹೋಗುತ್ತಿದ್ದ ಕಾರು ಮತ್ತು ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿ ಮಧ್ಯೆ ಅಪಘಾತ ಉಂಟಾಗಿ ಓರ್ವ ಬಾಲಕ ಮೃತಪಟ್ಟಿದ್ದು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗೂನಡ್ಕ ಶಾಲೆಯ ತಿರುವಿನಲ್ಲಿ ಬಳಿ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಕಾರು ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದವರು ಮೂಲತಃ ಬಂಟ್ವಾಳ ತಾಲೂಕಿನವರು ಎಂದು ತಿಳಿದು ಬಂದಿದೆ.









