ಗೂನಡ್ಕ: ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಅಳ್ಹಾ (ಬಕ್ರೀದ್) ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ನೂರಾರು ಮುಸ್ಲಿಂ ಬಾಂಧವರು ಮಸೀದಿಯಲ್ಲಿ ಜಮಾಯಿಸಿ ವಿಶೇಷ ಈದ್ ನಮಾಜ್ ಹಾಗೂ

ಪ್ರಾರ್ಥನೆಯಲ್ಲಿ ಪಾಲ್ಗೊಂಡರು.ಈ ಸಂದರ್ಭದಲ್ಲಿ ಮಸೀದಿಯ ಮುಖ್ಯ ಖತೀಬರಾದ ಅಶ್ರಫ್ ಸಖಾಫಿ ಈದ್ ಸಂದೇಶ ಸಾರಿದರು.
ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆದ ಈದುಲ್ ಅಳ್ಹಾ ಆಚರಣೆಯಲ್ಲಿ ಪರಸ್ಪರ ಶುಭ ಹಾರೈಸಿ ಹಬ್ಬದ ಸಂಭ್ರಮ ವಿನಿಮಯ ಮಾಡಿಕೊಂಡರು. ಸುಳ್ಯ ತಾಲೂಕು ಸುನ್ನಿ ಸಂಯುಕ್ತ ಜಮಾ ಅತ್ ಅಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಸೇರಿ ಪ್ರಮುಖರು ಪಾಲ್ಗೊಂಡಿದ್ದರು.















