ಮಂಗಳೂರು:ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ
ಫೆ15ರ ಬುಧವಾರ ನವಜೀವನ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು


ಪತ್ನಿ ಅನಿತಾ ಗೆಹ್ಲೋಟ್ ಸೇರಿದಂತೆ ಕುಟುಂಬ ಸಮೇತರಾಗಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ದೇವಸ್ಥಾನದ ಆಡಳಿತ ಮಂಡಳಿ ರಾಜ್ಯಪಾಲರಿಗೆ ಸ್ವಾಗತ ಕೋರಿದರು. ರಾಜ್ಯಪಾಲರು ಮತ್ತು ಪತ್ನಿ ಅನಿತಾ ಗೆಹ್ಲೋಟ್ ಅವರು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರು ರಾಜ್ಯಸಭಾ ಸಂಸದರು ಹಾಗೂ ಧರ್ಮಾಧಿಕಾರಿಗಳಾದ ವಿರೇಂದ್ರ ಹೆಗ್ಗಡೆ ಮತ್ತು ಅವರ ಪತ್ನಿ ಹೇಮಾವತಿ ಅವರನ್ನು ಭೇಟಿ ಮಾಡಿದರು.
ಹರ್ಷೇಂದ್ರ ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.