ಮಂಗಳೂರು:ಕರ್ನಾಟಕ ಸರ್ಕಾರದ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ಸೆ.8ರಂದು ದ.ಕ.ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು
ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ದ.ಕ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಹಾಗೂ ಇನ್ನಿತರ ಅಧಿಕಾರಿಗಳು ಸ್ವಾಗತಿಸಿದರು. ರಾಜ್ಯಪಾಲರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಗರದ ಟಿ.ಎಂ.ಎ. ಪೈ ಕನ್ವೆನ್ಶನ್ ಸಭಾಂಗಣದಲ್ಲಿ ದಿ ಫಿಸಿಯೋಥೆರಪಿ ಕಾನ್ಫರೆನ್ಸ್ ಮ್ಯಾಂಗಳೂರ್ ಫಿಸಿಯೋಕಾನ್ 2023 ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಖಾಸಗಿ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಆಡಳಿತದ ಅಧಿಕಾರಿಗಳೊಂದಿಗೆ ಸಂವಾದ ನಡೆಸುವರು. ಸಂಜೆ 5.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.