ಸುಳ್ಯ:ಸರಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ವಾರ್ಷಿಕ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕರಾದ ನಟರಾಜ ಎಂ ಎಸ್ ಕ್ರೀಡಾಕೂಟ ಉದ್ಘಾಟಿಸಿದರು.ಸಭಾಧ್ಯಕ್ಷತೆಯನ್ನು
ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಜಯಶ್ರೀ ಕೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಮಚಂದ್ರ ಡಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಣಮ್ಯ ಪ್ರಾರ್ಥಿಸಿದರು ಉಪನ್ಯಾಸಕರಾದ ರಾಮಚಂದ್ರ ಡಿ ಸ್ವಾಗತಿಸಿ, ಧನರಾಜ್ ಕುಮಾರ್ ಬಿ.ಸಿ ವಂದಿಸಿದರು. ಪುಷ್ಪರಾಜ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕಿಂತ ಮುಂದೆ ವಿದ್ಯಾರ್ಥಿಗಳ ಪಥಸಂಚಲನ ನಡೆಯಿತು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಫರ್ಧೆಗಳು ನಡೆಯಿತು.