ಸುಳ್ಯ:ಕರ್ನಾಟಕ ಸರಕಾರಿ ನೌಕರರ ಸಂಘದ ಸುಳ್ಯ ಶಾಖೆಯ ಮಹಾಸಭೆ, ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ಮಾಹಿತಿ ಕಾರ್ಯಾಗಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ. ರಮೇಶ್ ಉದ್ಘಾಟಿಸಿದರು. ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್ ಯು.ಕೆ. ಅತಿಥಿಗಳಾಗಿದ್ದರು.
‘ಕೆಲಸದ ಒತ್ತಡದ ನಡುವೆ ನೌಕರರ ಆರೋಗ್ಯ ಕಾಳಜಿ’ ಎಂಬ
ವಿಷಯದಲ್ಲಿ ನಡೆದ ಕಾರ್ಯಾಗಾರದಲ್ಲಿ ನಿವೃತ್ತ ಆರೋಗ್ಯ ಮೇಲ್ವಿಚಾರಕ ಜಯರಾಮ ಪೂಜಾರಿ ಮಾಹಿತಿ ನೀಡಿದರು. ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಪೃಥ್ವಿಕುಮಾರ್ ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಕುದ್ಪಾಜೆ, ಖಜಾಂಜಿ ಮಹದೇವ ಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಪ್ರಮೀಳಾ ಪ್ರಾರ್ಥಿಸಿದರು. ಕಾರ್ಯದರ್ಶಿ ಧನಲಕ್ಷ್ಮಿ ಕುದ್ಪಾಜೆ ಸ್ವಾಗತಿಸಿ, ಚಂದ್ರಕಾಂತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸನತ್ಕುಮಾರ್ ಎಸ್ಪಿ ವಂದಿಸಿದರು.

ವಾರ್ಷಿಕ ಮಹಾಸಭೆ:
ಬಳಿಕ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ತಹಶೀಲ್ದಾರ್ ಜಿ. ಮಂಜಿನಾಥ್ ನಿವೃತ್ತ ನೌಕರರನ್ನು ಸನ್ಮಾನಿಸಿದರು. ವಿಶೇಷ ಸಾಧನೆ ಮಾಡಿದ ನೌಕರರನ್ನು, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನೌಕರರನ್ನು ಅಭಿನಂದಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ನಿತಿನ್ ಪ್ರಭು, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಪೃಥ್ವಿ ಕುಮಾರ್ ಟಿ, ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್ ಯು.ಕೆ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ವೇದಿಕೆಯಲ್ಲಿದ್ದರು.
ಕಾರ್ಯದರ್ಶಿ ಧನಲಕ್ಷ್ಮೀ ಕುದ್ಪಾಜೆ ವರದಿ ಮಂಡಿಸಿದರು. ಕೋಶಾಧಿಕಾರಿ ಮಹದೇವಸ್ವಾಮಿ ಎಂ. ಲೆಕ್ಕಪತ್ರ ಮಂಡಿಸಿದರು. ಪೃಥ್ವಿಕುಮಾರ್ ಟಿ ಸ್ವಾಗತಿಸಿದರು, ಭವಾನಿ ವಂದಿಸಿದರು. ಆರೋಗ್ಯ ಇಲಾಖೆಯ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು.









