ಸುಳ್ಯ: ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ಸಂಘ ಹಾಗೂ ಐಕ್ಯೂಏಸಿ ಸಹಯೋಗದಲ್ಲಿ ಅಪೆರ್ಚರ್ 2k25 – ವಿಜ್ಞಾನಕ್ಕೆ ತೆರೆದುಕೊಳ್ಳಿ ಎಂಬ ಸೈನ್ಸ್ ಫೆಸ್ಟ್ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಾಸನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ
ಉಪನ್ಯಾಸಕಿ ಡಾ. ಲತಾ ಎಂ,ಗಂಧದ ಕೋಟಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಗಣಕ ವಿಜ್ಞಾನ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಸುರೇಶ್ ಕುಮಾರ್ ಹೆಚ್ ಎಂ ಮುಖ್ಯ ಅತಿಥಿಗಳಾಗಿದ್ದರು. ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಚಿಂತನೆ ಹಾಗೂ ಜೀವನ ಕೌಶಲ್ಯ ಕುರಿತು ವಿಶೇಷ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಯಿತು. ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು. ವಿಜ್ಞಾನ ಸಂಘದ ವಿದ್ಯಾರ್ಥಿ ಅಧ್ಯಕ್ಷ ತಕ್ಷಿತ್ ವರದಿ ಮಂಡಿಸಿದರು. ಕೋಶಾಧಿಕಾರಿ ಕಾವ್ಯಶ್ರೀ ಆಯವ್ಯಯ ವರದಿಯನ್ನು ಮಂಡಿಸಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಡಾ. ಪ್ರೀತಿ ಕೆ ರಾವ್, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಉದಯಶಂಕರ್ ಎಚ್., ಭೌತ ವಿಜ್ಞಾನ ವಿಭಾಗ ಮುಖ್ಯಸ್ಥರಾದ ಡಾ. ಮೋನಿಷಾ, ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾದ ರವೀಶ್ವರ ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಜ್ಞಾನ ಸಂಘದ ಪದಾಧಿಕಾರಿಗಳು, ಕಾಲೇಜಿನ ವಿದ್ಯಾರ್ಥಿಗಳು, ಪೂರ್ವ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.