ಸುಳ್ಯ: ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಡಿ.8 ಮತ್ತು 9 ರಂದು ನಡೆಯಿತು. ಡಿ.8ರಂದು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ ಗೌಡ ಬೊಮ್ಮೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ
ಕರ್ನಾಟಕ ತುಳು ಅಕಾಡೆಮಿಯ ಮಾಜಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ ಮುಖ್ಯ ಭಾಷಣಕಾರರಾಗಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ ಪ್ರಭು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಕಾಡುತೋಟ, ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಿದರು.

ಡಿ.9ರಂದು ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತಾ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಈ.ರಮೇಶ ಮತ್ತಿತರರು ಭಾಗವಹಿಸಿದ್ದರು.
ಎರಡು ದಿನಗಳ ಕಾಲ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮನ ಸೆಳೆಯಿತು.









