ಸುಳ್ಯ:ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಮಹೋತ್ಸವ 2025 ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯಲ್ಲಿ ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿ ಪೂಜೆ ಕಾರ್ಯಕ್ರಮ ಆ 18 ರಂದು ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಅಧ್ಯಕ್ಷ ಡಾ. ಕೆ ವಿ ಚಿದಾನಂದ ಅವರು ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು.ಈ ವಿದ್ಯಾ ಸಂಸ್ಥೆಯಲ್ಲಿ ಸಾವಿರಾರು ಮಂದಿ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆದು
ತಮ್ಮ ಜೀವನವನ್ನು ರೂಪಿಸಿ ಕೊಂಡಿದ್ದಾರೆ. ನೂರಾರು ಮಂದಿ ಹಳೆ ವಿದ್ಯಾರ್ಥಿಗಳು ಇಂದು ಜಿಲ್ಲಾ ಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗೆ ವಿವಿಧ ಹುದ್ದೆ ಗಳನ್ನು ಅಲಂಕರಿಸಿ ಕ್ಕೊಂಡಿದ್ದಾರೆ.
ನಾವೆಲ್ಲರೂ ಹಳೆ ವಿದ್ಯಾರ್ಥಿಗಳಾಗಿದ್ದು ಈ ಶಾಲೆಯ ಅಭಿವೃದ್ಧಿಗೆ ಕೈ ಜೋಡಿಸಬೇಕಾದದ್ದು ನಮ್ಮ ಕರ್ತವ್ಯ ಎಂದು ಹೇಳಿದರು. ಅಮೃತ ಮಹೋತ್ಸವದ ಲೋಗೋವನ್ನು ಮಾಜಿ ಸಚಿವ ಎಸ್.ಅಂಗಾರ ಲೋಕಾರ್ಪಣೆ ಗೊಳಿಸಿ ಶುಭ ಹಾರೈಸಿದರು.

ಅಮೃತ ಮಹೋತ್ಸವದ ಮನವಿ ಪತ್ರವನ್ನು ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ಬಿಡುಗಡೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಸವಣೂರು ಸೀತಾರಾಮ ರೈ ವಹಿಸಿದ್ದರು.ವೇದಿಕೆಯಲ್ಲಿ ಅಮೃತ ಮಹೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೆ.ಎಂ.ಮುಸ್ತಫ ಜನತಾ, ಕೋಶಾಧಿಕಾರಿ ಅಶೋಕ್ ಪ್ರಭು,ಕಾಲೇಜು ಆಡಳಿತ ಸಮಿತಿ ಅಧ್ಯಕ್ಷರಾದ ಲಿಂಗಪ್ಪ ಗೌಡ ,ಎಸ್ ಡಿ ಎಂ ಸಿ ಅಧ್ಯಕ್ಷೆ ಮಂಜುಳಾ ಬಡಿಗೇರ್,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಬಿ. ಸುಧಾಕರ ರೈ, ನ ಪಂ ಸದಸ್ಯ ಡೇವಿಡ್ ಧೀರ ಕ್ರಾಸ್ತ, ಶಾಲಾ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ,ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಮೃತ ಮಹೋತ್ಸವ ಸಮಿತಿಯ ಸದಸ್ಯರಾದ ಡಾ. ರಂಗಯ್ಯ,ಚಂದ್ರ ಶೇಖರ ಪೆರಾಲು,ಡಾ.ಎನ್.ಎ ಜ್ಞಾನೇಶ್, ಇಂಜಿನಿಯರ್ ವಿಜಯ ಕುಮಾರ್ ಉಬರಡ್ಕ,ನವೀನ್ ಸೋಮಯಾಗಿ, ಡಿ.ಎಸ್ ಗಿರೀಶ್,ಗೋಕುಲ್ದಾಸ್, ಲೋಕಯ್ಯ ಗೌಡ ಅತ್ಯಾಡಿ,ಶಶಿಧರ ರೈ ಪಡ್ಪು, ಎಸ್ ಡಿ ಎಂ ಸಿ ಉಪಾಧ್ಯಕ್ಷ ಹಸೈನಾರ್ ಜಯನಗರ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಎಂ ಬಿ ಸದಾಶಿವ ಸ್ವಾಗತಿಸಿ ಜೊತೆ ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ ವಂದಿಸಿದರು.











