ಸುಳ್ಯ:ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ 4 ನೂತನ ತರಗತಿ ಕೊಠಡಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಶಿಲಾನ್ಯಾಸ ನೆರವೇರಿಸಿದರು. ಅಮೇರಿಕಾದಲ್ಲಿರುವ ಭಾರತೀಯರ ಸ್ವಯಂ ಸೇವಾ ಸಂಸ್ಥೆ ಒಸಾಟ್ ವತಿಯಿಂದ ಸುಮಾರು 1.20 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಕೊಠಡಿ ಹಾಗೂ ಶೌಚಾಲಯ ನಿರ್ಮಾಣವಾಗಲಿದೆ. ಒಸಾಟ್ ವತಿಯಿಂದ
ಶಾಲೆಗಳಿಗೆ ಕೊಠಡಿ ನಿರ್ಮಿಸುವ 112 ನೇ ಯೋಜನೆ ಇದು. ಕಾಲೇಜು ವಿಭಾಗದಲ್ಲಿ ಕಾಲೇಜು ಆಡಳಿತ ಮಂಡಳಿಯ ವತಿಯಿಂದ ದಾನಿಗಳ, ಪೋಷಕರ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಕಾರದಲ್ಲಿ ನಿರ್ಮಾಣ ಮಾಡುವ ಸಭಾಭವನಕ್ಕೆ ಈ ಸಂದರ್ಭದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು.ಪುರೋಹಿತ ನಾಗರಾಜ ಭಟ್ ರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದವು.
ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರು, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್, ಜನಾರ್ದನ ಮಾಸ್ಟರ್ ಗಣಿತ ಸಂಘದ ಅಧ್ಯಕ್ಷ ಎಂ.ಬಿ.ಸದಾಶಿವ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ನ.ಪಂ.ಸದಸ್ಯ ಡೇವಿಡ್ ಧೀರಾ ಕ್ರಾಸ್ತ, ಸುಳ್ಯ ತಾ.ಪಂ. ಇ.ಒ. ರಾಜಣ್ಣ, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ , ದಾನಿಗಳಾದ ಸಂಧ್ಯಾ ಮತ್ತು ಗುರು ಪಾಂಗಾಳ, ಒಸಾಟ್ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ವಾದಿರಾಜ ಭಟ್, ಒಸಾಟ್ ಸಮಿತಿ ಸದಸ್ಯ ಎಸ್.ಬಾಲಕೃಷ್ಣ, ಒಸಾಟ್ ಸಂಸ್ಥೆಯ ಕಿಶೋರ್ ಕುಮಾರ್, ಗುತ್ತಿಗೆದಾರರಾದ ಲಕ್ಷ್ಮೀನಾರಾಯಣ ಉಪಾಧ್ಯಾಯ, ಕಾಲೇಜಿನ ಪ್ರಾಂಶುಪಾಲರಾದ ಮೋಹನ ಗೌಡ ಬೊಮ್ಮೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕೊಠಡಿ ನಿರ್ಮಾಣಕ್ಕೆ ಸಹಕರಿಸುತ್ತಿರುವ ದಾನಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಡಾ. ಸುಂದರ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು.
ಕಾಲೇಜು ವಿಭಾಗದಲ್ಲಿ ನೂತನವಾಗಿ ಸಭಾಂಗಣ ನಿರ್ಮಾಣವಾಗಲಿದ್ದು, ಗುದ್ದಲಿ ಪೂಜೆಯನ್ನು ಶಾಸಕರು ನೆರವೇರಿಸಿದರು. ಕಾಲೇಜು ಪ್ರಾಂಶುಪಾಲ ಮೋಹನ್ ಬೊಮ್ಮೆಟ್ಟಿಯವರು ಕಾರ್ಯಕ್ರಮ ನಿರ್ವಹಿಸಿದರು.