ಸುಳ್ಯ: ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 315 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 301 ಮಂದಿ ಉತ್ತೀರ್ಣರಾಗಿ ಶೇ.96 ಫಲಿತಾಂಶ ದಾಖಲಿಸಿಕೊಂಡಿದೆ.ವಿಜ್ಞಾನ ವಿಭಾಗದಲ್ಲಿ ಒಟ್ಟು
63 ವಿದ್ಯಾರ್ಥಿಗಳು ಪರೀಕ್ಷೆ ಬರೆದು ಎಲ್ಲರೂ ಪಾಸಾ ಶೇ.100 ಫಲಿತಾಂಶ ಬಂದಿದೆ. 24 ಮಂದಿ ಡಿಸ್ಟಿಂಕ್ಷನ್ ಪಡೆದರು.ಕಲಾ ವಿಭಾಗದಿಂದ 117 ವಿದ್ಯಾರ್ಥಿಗಳು ಪರೀಕ್ಷೆಗೆ ಬರೆದಿದ್ದು 108 ಮಂದಿ ತೇರ್ಗಡೆಯಾಗಿದ್ದಾರೆ. ಶೇ.92.29 ಫಲಿತಾಂಶ ಬಂದಿದೆ 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಿಂದ 135 ವಿದ್ಯಾರ್ಥಿಗಳು ಪರೀಕ್ಷೆ ಬರೆದು 130 ಮಂದಿ ಪಾಸಾಗಿದ್ದಾರೆ. 96.66 ಫಲಿತಾಂಶ ದಾಖಲಾಗಿದೆ. 20ಮಂದಿ ಡಿಸ್ಟಿಂಕ್ಷನ್ ಪಡೆದಿದ್ದಾರೆ.