ಸುಳ್ಯ: ಸುಳ್ಯ ತಾಲೂಕು ಆಸ್ಪತ್ರೆಗೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು
ಡಾ.ಶಾಲಿನಿ ವಿ.ಎಲ್.(M.S O.B.G.) ಕರ್ತವ್ಯಕ್ಕೆ ಹಾಜರಾಗಿರುತ್ತಾರೆ ಹಾಗೂ ಸೇವೆಗೆ ಲಭ್ಯವಿರುತ್ತಾರೆ ಆಸ್ಪತ್ರೆಯ
ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ ಕೆ.ವಿ.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಹುದ್ದೆ ಖಾಲಿ ಇತ್ತು.