ಸುಳ್ಯ:ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.ಸಂಪನ್ಮೂಲ ವ್ಯಕ್ತಿಯಾಗಿ ಶಾರದ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ
ಸ್ವರ್ಣಕಲಾ ಎ.ಎಸ್. ಆಗಮಿಸಿ ಮಹಿಳಾ ದಿನಾಚರಣೆಯ ಕುರಿತು ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಗೌಡ ಮಹಿಳಾ ಘಟಕದ
ಸ್ಥಾಪಕ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ, ಹಾಗೂ ಸುಳ್ಯ ಮಹಿಳಾ ಘಟಕದ ನಿಕಟ ಪೂರ್ವಧ್ಯಕ್ಷೆ ಪುಷ್ಪಾವತಿ ಮಾಣಿಬೆಟ್ಟು ಇವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಸುಳ್ಯ ಮಹಿಳಾ ಘಟಕ ಹಾಗೂ ನಗರ ಸಮಿತಿ ವತಿಯಿಂದ ಮಹಿಳೆಯರಿಗಾಗಿ ವಿವಿಧ ಒಳಾಂಗಣ ಆಟವನ್ನು ಏರ್ಪಡಿಸಲಾಗಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಗೌಡ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್.ಗಂಗಾಧರ್, ವೆಂಕಟ್ರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ.ಸದಾನಂದ, ರೋಟರಿ ಕ್ಲಬ್ ಅಧ್ಯಕ್ಷೆ ಯೋಗಿತಾ ಗೋಪಿನಾಥ್, ತರುಣ ಘಟಕದ ಅಧ್ಯಕ್ಷ ಪ್ರೀತಂ ಕೇರ್ಪಳ, ಗೌಡ ಯುವ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಅಡ್ಕಬಳೆ , ಗೌಡ ತುವ ಸೇವಾ ಸಂಘದ ನಿರ್ದೇಶಕರಾದ ಎಮ್.ಎಚ್.ಸುರೇಶ್ ವೇದಿಕೆಯಲ್ಲಿದ್ದರು.
ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು ಸ್ವಾಗತಿಸಿ, ಖಜಾಂಜಿ ಶ್ರೀಮತಿ ಜಯಶ್ರೀ ರಾಮಚಂದ್ರ ಪಲ್ಲತ್ತಡ್ಕ ಪ್ರಾರ್ಥಿಸಿ, ತಾಲೂಕು ಮಹಿಳಾ ಘಟಕದ ನಿರ್ದೇಶಕಿ ಭಾರತಿ ಪುರುಷೋತ್ತಮ ವಂದಿಸಿ, ಸವಿತಾ ಸಂದೇಶ್ ಕಾರ್ಯಕ್ರಮ ನಿರೂಪಿಸಿದರು. ನಗರ ಘಟಕದ ಅಧ್ಯಕ್ಷೆ ಹರ್ಷ ಕರುಣಾಕರ ಸಹಕರಿಸಿದರು.