ಸಂಪಾಜೆ: ಗೌಡ ಸಮುದಾಯದ ಯುವಕ ಯುವತಿಯರು ಎಲ್ಲಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಿದ್ದಾರೆ. ಅದೇ ರೀತಿ ಕ್ರೀಡಾ ಕ್ಷೇತ್ರದಲ್ಲಿಯೂ ಗ್ರಾಮೀಣ ಯುವಕ, ಯುವತಿಯರು ತಮ್ಮ ಸಾಮರ್ಥ್ಯವನ್ನು ಮೆರೆಯಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಹೇಳಿದ್ದಾರೆ.ಎರಡು ದಿನಗಳ ಕಾಲ
ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ 10 ತಂಡಗಳ ಲೀಗ್ ಮಾದರಿಯ ಓವರ್ ಆರ್ಮ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಗೌಡ ಕ್ರಿಕೆಟ್ ಹಬ್ಬ ‘ಗೌಡ ಪ್ರೀಮಿಯರ್ ಲೀಗ್’ 2025ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿಹೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಭಾಷೆ, ಕಲೆ, ಸಂಸ್ಕೃತಿಯ ಜೊತೆಗೆ

ಕ್ರೀಡೆಗಳ ಅಭಿವೃದ್ಧಿಗೆ ಮತ್ತು ಕ್ರೀಡಾಪಟುಗಳ ಬೆಳವಣಿಗೆಗೆ ಅಕಾಡೆಮಿ ವತಿಯಿಂದ ಎಲ್ಲಾ ನೆರವು, ಸಹಕಾರ ನೀಡುವುದಾಗಿ ಅವರು ತಿಳಿಸಿದರು.
ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಸಾಮಜಿಕ ಮುಖಂಡರಾದ ಸೂರಜ್ ಹೊಸೂರು ಮತ್ತಿತರರು ಉಪಸ್ಥಿತರಿದ್ದರು.
