ಸುಳ್ಯ:ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ ತಾಲೂಕು ಮಹಿಳಾ ಘಟಕ ಮತ್ತು ತರುಣ ಘಟಕ ಸುಳ್ಯ ನಗರ ಗೌಡ ಸಮಿತಿ, ಮಹಿಳಾ ಘಟಕ, ತರುಣ ಘಟಕದ ಆಶ್ರಯದಲ್ಲಿ 13ನೇ ವರ್ಷದ ಆಟಿ ಸಂಭ್ರಮ ಸಂಪನ್ನಗೊಂಡಿತು. ಸುಳ್ಯದ ಕೋಡಿಯಾಲಬೈಲಿನ ಗೌಡ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ
ಸಾಧಕರನ್ನು ಸನ್ಮಾನಿಸಲಾಯಿತು. ಗೌಡರ ಯುವ ಸೇವಾ ಸಂಘದ ನಗರ ಸಮಿತಿ ಅಧ್ಯಕ್ಷ ರಾಕೇಶ್ ಕುಂಟಿಕಾನ ಅಧ್ಯಕ್ಷತೆ ವಹಿಸಿದ್ದರು. ಆಟಿ ತಿಂಗಳ ಮಹತ್ವದ ಕುರಿತು ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯ ಚಂದ್ರಶೇಖರ ಪೇರಾಲು ಉಪನ್ಯಾಸ ನೀಡಿದರು. ಮುಖ್ಯ ಅತಿಥಿಯಾಗಿದ್ದ ಕಲ್ಕುಡ ದೈವಸ್ಥಾನದ ಆಡಳಿತ ಧರ್ಮದರ್ಶಿ ಉಮೇಶ್ ಪಿ.ಕೆ.ಸನ್ಮಾನ ನೆರವೇರಿಸಿದರು.

ಗೌಡರ ಯುವ ಸೇವಾ ಸಂಘದ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ಅಭಿನಂದನಾ ಭಾಷಣ ಮಾಡಿದರು. ಶ್ರೀ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಸಿ.ಸದಾನಂದ ಅತಿಥಿಯಾಗಿದ್ದರು.
ಈ ಸಂದರ್ಭದಲ್ಲಿ ವಿವಿಧ ಕ್ಷೆತ್ರದಲ್ಲಿ ಸಾಧನೆ ಮಾಡಿದ ಡಾ. ಕೇಶವ ಸುಳ್ಳಿ, ಎಂ. ಡಿ ನಿರಂಜನ್, ನವೀತ್ ಕಂದಡ್ಕ, ಡಾ.ಅಭಿಜ್ಞಾ, ತಿಮ್ಮಪ್ಪ ಗೌಡ ನಾವೂರು, ಮಾಯಿಲಪ್ಪ ಗೌಡ ಸೂಂತೋಡು, ಸೋನಾ ಅಡ್ಕಾರ್, ಭೂಮಿಕಾ ಅವರನ್ನು ಸನ್ಮಾನಿಸಲಾಯಿತು.

ಗೌಡರ ಯುವ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಅಡ್ಕಬಳೆ, ತಾಲೂಕು ತರುಣ ಘಟಕ ಅಧ್ಯಕ್ಷ ಪ್ರೀತಮ್ ಡಿ.ಕೆ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ವಿನುತ ಪಾತಿಕಲ್ಲು, ನಗರ ಸಮಿತಿಯ ಕಾರ್ಯದರ್ಶಿ ರಾಧಾಕೃಷ್ಣ, ಕುಂತಿನಡ್ಕ ಮಹಿಳಾ ನಗರ ಘಟಕ ಅಧ್ಯಕ್ಷೆ ಹರ್ಷಾ ಕರುಣಾಕರ ಕಾರ್ಯದರ್ಶಿ ಸುಜಾತ ಕಿರಣ ಕುರುಂಜಿ , ಸಮಿತಿಯ ಪದಾಧಿಕಾರಿಗಳು , ಸದಸ್ಯರು ಉಪಸ್ಥಿತರಿದ್ದರು.
ಐ.ಬಿ.ಚಂದ್ರಶೇಖರ ಸ್ವಾಗತಿಸಿ, ಡಿ.ಟಿ.ದಯಾನಂದ ವಂದಿಸಿದರು.ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.ಮಕ್ಕಳು ಮಹಿಳೆಯರು ಹಾಗೂ ಪುರುಷರು ಸೇರಿದಂತೆ ಎಲ್ಲಾ ವಯೋಮಾನದವರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.





