ಸುಳ್ಯ: ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಾತೃ ಸಂಘದ ಮತ್ತು ತಾಲೂಕು ಮಹಿಳಾ ಘಟಕ, ತರುಣ ಘಟಕ ಹಾಗೂ ಹಾಗೂ ಸುಳ್ಯ ನಗರ ಘಟಕದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮ ಮತ್ತು ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಟೆಯಿತು. ಗೌಡರ ಯುವ ಸೇವಾ ಸಂಘದ ನೂತನ
ಅಧ್ಯಕ್ಷ ಪಿ.ಎಸ್.ಗಂಗಾಧರ, ತರುಣ ಘಟಕದ ಅಧ್ಯಕ್ಷ ಪ್ರೀತಂ ಡಿ.ಕೆ, ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು, ನಗರ ಘಟಕದ ಅಧ್ಯಕ್ಷ ರಾಕೇಶ್ ಕುಂಟಿಕಾನ ಅವರ ನೇತೃತ್ವದ ತಂಡ ಅಧಿಕಾರ ಸ್ವೀಕರಿಸಿದರು.
ಪಂಜ ವಲಯ ಅರಣ್ಯಾಧಿಕಾರಿ ಗಿರೀಶ್ ಆರ್ ಸಮಾರಂಭವನ್ನು ಉದ್ಘಾಟಿಸಿದರು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಗೌಡರ ಯುವ ಸೇವಾ ಸಂಘದ ಸ್ಥಾಪಕಾಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಗೌಡ ಸಮುದಾಯ ಭವನ ಸಮಿತಿಯ ಅಧ್ಯಕ್ಷ ಎ.ವಿ.ತೀರ್ಥರಾಮ, ಶ್ರೀ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಗೌಡರ ಯುವ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರ ಕೋಲ್ಚಾರ್, ಎಂ.ಜಿ.ಎಂ ಶಾಲಾ ಸಂಚಾಲಕ ದೊಡ್ಡಣ್ಣ ಬರೆಮೇಲು, ಮಹಿಳಾ ಘಟಕದ ನೂತನ ಅಧ್ಯಕ್ಷೆ ವಿನುತಾ ಪಾತಿಕಲ್ಲು, ನಿಕಟಪೂರ್ವಾಧ್ಯಕ್ಷೆ ಪುಷ್ಪಾ ರಾಧಾಕೃಷ್ಣ ಮಾಣಿಬೆಟ್ಟು, ನಗರ ಘಟಕದ ಅಧ್ಯಕ್ಷ ರಾಕೇಶ್ ಕುಂಟಿಕಾನ, ತರುಣ ಘಟಕದ ಅಧ್ಯಕ್ಷ ಪ್ರೀತಂ ಡಿ.ಕೆ, ನಿಕಟ ಪೂರ್ವಾಧ್ಯಕ್ಷ ರಜತ್ ಅಡ್ಕಾರ್, ಗೌಡರ ಯುವ ಸೇವಾ ಸಂಘದ
ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಅಡ್ಕಬಳೆ, ಕೋಶಾಧಿಕಾರಿ ದಿನೇಶ್ ಮಡ್ತಿಲ, ನಿಕಟಪೂರ್ವ ಕೋಶಾಧಿಕಾರಿ, ಚಂದ್ರಶೇಖರ ಮೇರ್ಕಜೆ, ನಗರ ಮಹಿಳಾ ಘಟಕದ ಅಧ್ಯಕ್ಷೆ ಹರ್ಷಾ ಕರುಣಾಕರ, ಪ್ರಧಾನ ಕಾರ್ಯದರ್ಶಿ ಸುಜಾತ ಕುರುಂಜಿ, ತರುಣ ಘಟಕದ ಪ್ರಧಾನ ಕಾರ್ಯದರ್ಶಿ ಹೇಮಂತ್ ನಾರ್ಕೋಡು, ಕೋಶಾಧಿಕಾರಿ ರೂಪೇಶ್ ಪೂಜಾರಿಮನೆ, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸವಿತಾ ಸಂದೇಶ, ಕೋಶಾಧಿಕಾರಿ ಜಯಶ್ರೀ ರಾಮಚಂದ್ರ ಪಲ್ಲತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ನಾರಿಶಕ್ತಿ ಬೈಕ್ ರಾಲಿಯಲ್ಲಿ ಭಾಗವಹಿಸಿದ ದೃಷ್ಠಿ ಮಲ್ಕಜೆ, ಎಂಡಿಎಸ್ನಲ್ಲಿ ಪ್ರಥಮ ರಾಂಕ್ ಪಡೆದ ಸಂದೀಪ್ ಬೀರ್ಮಕಜೆ, ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶಿಶ್ ಆನಂದ ಖಂಡಿಗ, ಯೋಗ ಸಾಧಕರಾದ ಕ್ಷಮಾ ಮುಡೂರು, ವಿದಾತ್ ಮುಡೂರು ಅವರನ್ನು ಸನ್ಮಾನಿಸಲಾಯಿತು.
ಗೌಡರ ಯುವ ಸೇವಾ ಸಂಘದ ವತಿಯಿಂದ ನಡೆಯುವ ಆಟಿ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಸದಾನಂದ ಮಾವಜಿ ಬಿಡುಗಡೆ ಮಾಡಿದರು.ಎಂಜಿಎಂ ಪ್ರೌಢ ಶಾಲೆಯ ವತಿಯಿಂದ ಸಮುದಾಯ ಭವನಕ್ಕೆ ಧ್ವನಿ ವರ್ಧಕ ಕೊಡುಗೆ ನೀಡಲಾಯಿತು. ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಹಾಗೂ ಸಹ ಮುಖ್ಯ ಶಿಕ್ಷಕಿ ಚಿತ್ರಲೇಖ ಮಡಪ್ಪಾಡಿ ಅವರನ್ನು ಸನ್ಮಾನಿಸಲಾಯಿತು. ಶೋಭಾನೆ ಹಾಡುವವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಗೌಡರ ಯುವ ಸೇವಾ ಸಂಘದ ನಿಕಟ ಪೂರ್ವಾಧ್ಯಕ್ಷ ಚಂದ್ರ ಕೋಲ್ಚಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜನಾರ್ಧನ ಕೊಳಂಜಿರೋಡಿ-ಕುಸುಮ ದಂಪತಿಗಳು ಪ್ರಾರ್ಥನೆ ಹಾಡಿದರು. ಅರೆಭಾಷೆ ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೇರಾಲು ಕಾರ್ಯಕ್ರಮ ನಿರೂಪಿಸಿದರು.