ಸುಳ್ಯ:ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ ತಾಲೂಕು ಮಹಿಳಾ ಘಟಕ ಮತ್ತು ತರುಣ ಘಟಕ ಸುಳ್ಯ ನಗರ ಗೌಡ ಸಮಿತಿ, ಮಹಿಳಾ ಘಟಕ, ತರುಣ ಘಟಕದ ಆಶ್ರಯದಲ್ಲಿ 13ನೇ ವರ್ಷದ ಆಟಿ ಸಂಭ್ರಮ ಆ.3ರಂದು ಸುಳ್ಯದ ಕೋಡಿಯಾಲಬೈಲಿನ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಗೌಡರ ಯುವ ಸೇವಾ ಸಂಘದ ನಗರ ಸಮಿತಿ ಅಧ್ಯಕ್ಷ ರಾಕೇಶ್ ಕುಂಟಿಕಾನ ತಿಳಿಸಿದ್ದಾರೆ.
ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಅವರು ಸಮಾಜ ಬಾಂಧವರನ್ನು ಒಟ್ಟು ಸೇರಿಸಿಕೊಂಡು ಮಕ್ಕಳು ಮಹಿಳೆಯರು ಹಾಗೂ ಪುರುಷರು ಸೇರಿದಂತೆ ಎಲ್ಲಾ ವಯೋಮಾನದವರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಈ ಬಾರಿಯ ಆಟಿ ಆಚರಣೆಯನ್ನು ಸಂಭ್ರಮದಿಂದ ನಡೆಸಲಾಗುವುದು ಎಂದು ಹೇಳಿದರು. ಆಟಿ ಆಚರಣೆಯನ್ನು ನಾಟಿ ವೈದ್ಯರಾದ ಜನಾರ್ಧನ ಗೌಡ ಸೂಂತೋಡು ಮತ್ತು ವಸಂತಿ ದಂಪತಿಗಳು ಉದ್ಘಾಟಿಸಲಿದ್ದಾರೆ. ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಯಾಗಿ ವಕೀಲರಾದ ರಾಮಕೃಷ್ಣ ಅಮೈ ಭಾಗವಹಿಸಲಿರುವರು.
ಈ ಸಂದರ್ಭದಲ್ಲಿ ಸಮಾಜದ ಎಲ್ಲಾ ವಯೋಮಾನದವರಿಗೆ ವಿವಿಧ ಸ್ಪರ್ಧೆ ಗಳನ್ನು ನಡೆಸಲಾಗುವುದು ಎಂದರು
ಸಮಾರೊಪ ಸಮಾರಂಭದಲ್ಲಿ ಆಟಿ ತಿಂಗಳ ಮಹತ್ವದ ಕುರಿತು ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯ ಚಂದ್ರಶೇಖರ ಪೇರಾಲು ಉಪನ್ಯಾಸ ನೀಡಲಿದ್ದಾರೆ. ಅತಿಥಿಗಳಾಗಿ ಕಲ್ಕುಡ ದೈವಸ್ಥಾನದ ಆಡಳಿತ ಧರ್ಮದರ್ಶಿ ಉಮೇಶ್ ಪಿ.ಕೆ, ವೆಂಕಟರಮಣ ಸೊಸೈಟಿ ಅಧ್ಯಕ್ಷ ಕೆ.ಸಿ.ಸದಾನಂದ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಕ್ಷೆತ್ರದಲ್ಲಿ ಸಾಧನೆ ಮಾಡಿದ ಡಾ. ಕೇಶವ ಸುಳ್ಳಿ, ಎಂ. ಡಿ ನಿರಂಜನ್,ನವೀತ್ ಕಂದಡ್ಕ, ಡಾ. ಅಭಿಜ್ಞಾ, ತಿಮ್ಮಪ್ಪ ಗೌಡ ನಾವೂರು, ಮಾಯಿಲಪ್ಪ ಗೌಡ ಸೂಂತೋಡು, ಸೋನಾ ಅಡ್ಕಾರ್, ಭೂಮಿಕಾ ಅವರನ್ನು ಸನ್ಮಾನಿಸಲಾಗುವುದು ಎಂದು ವಿವರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ,ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಆಡ್ಕಬಳೆ, ನಗರ ಸಮಿತಿ ಕಾರ್ಯದರ್ಶಿ ರಾಧಾಕೃಷ್ಣ ಕುಂತಿನಡ್ಕ,ಮಹಿಳಾ ಘಟಕದ ಅಧ್ಯಕ್ಷೆ ಹರ್ಷ ಕರುಣಾಕರ ಉಪಸ್ಥಿತರಿದ್ದರು.














