ಸುಳ್ಯ:ಕೊಲ್ಲಮೊಗ್ರ ಗ್ರಾಮ ಪಂಚಾಯತ್ನಲ್ಲಿ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯುತಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಾಲಸುಬ್ರಹ್ಮಣ್ಯ ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಾಮಪತ್ರ ಹಿಂತೆಗೆತ ಮಾಡಿದ ಕಾರಣ ಬಾಲಸುಬ್ರಹ್ಮಣ್ಯ ಭಟ್ ಅವಿರೋಧ ಆಯ್ಕೆ ನಡೆದಿದೆ.ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್ನಲ್ಲಿ
ಬಾಲಸುಬ್ರಹ್ಮಣ್ಯ ಭಟ್, ಪೃಥ್ವಿಚಂದ್ರ ಮುಂಡಾಜೆ
ತೆರವಾಗಿದ್ದ ಒಂದು ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದ್ದು , ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪೃಥ್ವಿಚಂದ್ರ ಮುಂಡಾಜೆ ಅವಿರೋಧವಾಗಿ ಆಯ್ಕೆಯಾದರು. ಬಿಜೆಪಿ ಬೆಂಬಲಿತ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು ಹರಿಹರ ಪಲ್ಲತಡ್ಕ ಗ್ರಾಮಪಂಚಾಯತ್ನ ಸದಸ್ಯರಾಗಿ ಆಯ್ಕೆಯಾದರು.
ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಯಜ್ಞೇಶ್ವರ ಇರಂತಕಜೆ ಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.