ಸುಳ್ಯ: ಮುಂದಿನ ಎರಡೂವರೆ ವರ್ಷದ ಅವಧಿಗೆ ವಿವಿಧ ಗ್ರಾಮ ಪಂಚಾಯತ್ಗಳ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು.
ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗಿ ಗ್ರಾಮಾಡಳಿತದ ಸಾರಥಿಗಳಾಗಿ ಆಯ್ಕೆಯಾದವರ ವಿವರ ಈ ಕೆಳಗಿನಂತೆ
ಇದೆ.
ಮಡಪ್ಪಾಡಿ:
ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಉಷಾ ಜಯರಾಮ್ , ಉಪಾಧ್ಯಕ್ಷರಾಗಿ ಸುಜಾತ ಹಾಡಿಕಲ್ಲು ಅವಿರೋಧವಾಗಿ ಆಯ್ಕೆ ಯಾದರು. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಪ.ಪಂಗಡಕ್ಕೆ ಮೀಸಲಾಗಿತ್ತು. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸತೀಶ್ ಕೊಯಿಂಗಾಜೆ ಚುನಾವಣಾಧಿಕಾರಿಯಾಗಿದ್ದರು.
ಕನಕಮಜಲು:
ಕನಕಮಜಲು ಗ್ರಾಮ ಪಂಚಾಯತಿಯ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶಾರದಾ ಉಗ್ಗಮೂಲೆ, ಉಪಾಧ್ಯಕ್ಷರಾಗಿ ರವಿಚಂದ್ರ ಕಾಪಿಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಹಾಯಕ ತೋಟಗಾರಿಕಾ ಅಧಿಕಾರಿ ಜಗದೀಶ್ ಚುನಾವಣಾಧಿಕಾರಿಯಾಗಿದ್ದರು.
ಬಾಳಿಲ:
ಬಾಳಿಲ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷರಾಗಿ ಪಾವನ ಜೋಗಿಬೆಟ್ಟು ಹಾಗೂ ಉಪಾಧ್ಯಕ್ಷರಾಗಿ ರಮೇಶ್ ರೈ ಅಗಲ್ಪಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿ.ಪಂ. ಇಂಜಿನಿಯರ್ ಮಣಿಕಂಠ ಚುನಾವಣಾಧಿಕಾರಿಯಾಗಿದ್ದರು
ಉಬರಡ್ಕ ಮಿತ್ತೂರು:
ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಪೂರ್ಣಿಮಾ ಸೂಂತೋಡು ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಚಿತ್ರಕುಮಾರಿ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಾಗಿದ್ದು ಪೂರ್ಣಿಮಾ ಸೂಂತೋಡು ಮಾತ್ರ ನಾಮಪತ್ರ ಸಲ್ಲಿಸಿದ್ದರು.
ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಮಹಿಳೆ ಮೀಸಲಾಗಿದ್ದು ಪ್ರಸ್ತುತ ಅಧ್ಯಕ್ಷರಾಗಿರುವ ಚಿತ್ರಕುಮಾರಿ ನಾಮಪತ್ರ ಸಲ್ಲಿಸಿದ್ದರು.ಒಬ್ಬರೇ ನಾಮಪತ್ರ ಸಲ್ಲಿಸಿ ಇವರು ಅವಿರೋಧವಾಗಿ ಆಯ್ಕೆಯಾದರು.
ಪೆರುವಾಜೆ:
ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಮುಕ್ಕೂರು ,ಉಪಾಧ್ಯಕ್ಷರಾಗಿ ಶಹನಾಜ್ ಅವಿರೋಧವಾಗಿ ಆಯ್ಕೆಯಾದರು. ಹಾಲಿ ಅಧ್ಯಕ್ಷರಾಗಿರುವ ಜಗನ್ನಾಥ ಪೂಜಾರಿ ಅವರು ಮುಂದಿನ ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಪೆರುವಾಜೆ ಡಾ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಮಚಂದ್ರ ಕೆ.ಚುನಾವಣಾಧಿಕಾರಿಯಾಗಿದ್ದರು.
ಅಜ್ಜಾವರ:
ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಬೇಬಿ ಕಲ್ತಡ್ಕ,
ಉಪಾಧ್ಯಕ್ಷರಾಗಿ ಜಯರಾಮ ಅತ್ಯಡ್ಕ ಅವಿರೋಧವಾಗಿ ಆಯ್ಕೆಯಾದರು.
ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕರಾದ ಡಾ.ಸುಂದರ ಕೇನಾಜೆ ಚುನಾವಣಾಧಿಕಾರಿಯಾಗಿದ್ದರು.
ಹರಿಹರ ಪಲ್ಲತ್ತಡ್ಕ:
ಹರಿಹರ ಪಲ್ಲತಡ್ಕ ಗ್ರಾ.ಪಂ ಅಧ್ಯಕ್ಷರಾಗಿ ವಿಜಯ ಕುಮಾರ್ ಅಂಙಣ, ಉಪಾಧ್ಯಕ್ಷರಾಗಿ ಜಯಂತ ಬಾಳುಗೋಡು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು ಅಧ್ಯಕ್ಷರಾಗಿ ಹಾಲಿ ಉಪಾಧ್ಯಕ್ಷ ವಿಜಯ ಕುಮಾರ್ ಅಂಙಣ, ಉಪಾಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಜಯಂತ ಬಾಳುಗೋಡು ನಾಮಪತ್ರ ಸಲ್ಲಿಸಿದ್ದು ಬೇರೆ ಯಾವುದೇ ನಾಮಪತ್ರ ಇಲ್ಕದೇ ಇದ್ದ ಕಾರಣ ಇವರು ಅವಿರೋಧವಾಗಿ ಆಯ್ಕೆಯಾದರು. ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್. ಚುನಾವಣಾ ಅಧಿಕಾರಿಯಾಗಿದ್ದರು.
ಕಲ್ಮಡ್ಕ:
ಕಲ್ಮಡ್ಕ ಗ್ರಾ.ಪಂ.ನ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಹಾಗೂ ಉಪಾಧ್ಯಕ್ಷರಾಗಿ ಮೋಹಿನಿ ಮಾಳಪ್ಪಮಕ್ಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಚುನಾವಣಾಧಿಕಾರಿಯಾಗಿದ್ದರು.
ಪೆರಾಜೆ:
ಮಡಿಕೇರಿ ತಾಲೂಕಿನ ಗಡಿಗ್ರಾಮ ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಚಂದ್ರಕಲಾ ಪಿ.ಬಿ ಹಾಗೂ ಉಪಾಧ್ಯಕ್ಷರಾಗಿ ನಂಜಪ್ಪ ನಿಡ್ಯಮಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಡಿಕೇರಿ ತಾಲೂಕಿನ ತೋಟಗಾರಿಕಾ ಇಲಾಖೆಯ ಅಧಿಕಾರಿ ಪ್ರಮೋದ್ ಚುನಾವಣಾಧಿಕಾರಿಯಾಗಿದ್ದರು.