ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಕಡಬ, ಗ್ರಾಮ ಪಂಚಾಯತ್ ಕುಟ್ರುಪಾಡಿ ಆಶ್ರಯದಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ನಿರ್ಮಾಣಗೊಂಡ ಕುಟ್ರಪ್ಪಾಡಿ ಗ್ರಾಮ
ಪಂಚಾಯತ್ ಸಭಾಂಗಣದ ಉದ್ಘಾಟನೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ಬಳಿಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್, ಪುತ್ತೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಪುಲಸ್ಯ ರೈ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಘನ ತ್ಯಾಜ್ಯ ಘಟಕದ ಕಾಮಗಾರಿಯನ್ನು ಶಾಸಕರು ವೀಕ್ಷಿಸಿದರು.