ಸುಳ್ಯ:ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟವನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು , ಪ್ರಧಾನ ಕಾರ್ಯದರ್ಶಿಯಾಗಿ ಅರಂತೋಡು ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ, ಸಂಚಾಲಕರಾಗಿ ಕಲ್ಮಡ್ಕ ಗ್ರಾ.ಪಂ. ಅಧ್ಯಕ್ಷ ಮಹೇಶ್ ಕುಮಾರ್ ಭಟ್ ಕರಿಕ್ಕಳ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯತಿ ಸಭಾಭವನದಲ್ಲಿ ನ.3ರಂದು ಜರುಗಿದ
ಸುಳ್ಯ ತಾಲೂಕು ಗ್ರಾಮ ಪಂಚಾಯತಿ
ಅಧ್ಯಕ್ಷ – ಉಪಾಧ್ಯಕ್ಷರುಗಳ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಮಡಪ್ಪಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾ ಜಯರಾಮ್ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷರುಗಳಾಗಿ ಮಡಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ ಉಷಾ ಜಯರಾಮ್, ಕೊಡಿಯಾಲ ಗ್ರಾ.ಪಂ. ಅಧ್ಯಕ್ಷ ಹರ್ಷನ್ ಕೆ.ಟಿ., ಸಂಪಾಜೆ ಗ್ರಾ.ಪಂ. ಉಪಾಧ್ಯಕ್ಷ ಎಸ್.ಕೆ. ಹನೀಫ್ , ಆಲೆಟ್ಟಿ ಗ್ರಾ.ಪಂ. ಅಧ್ಯಕ್ಷೆ ವೀಣಾ ವಸಂತ್, ಐವರ್ನಾಡು ಗ್ರಾ.ಪಂ.ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳಾಗಿ ಹರಿಹರಪಲ್ಲತ್ತಡ್ಕ ಗ್ರಾ.ಪಂ. ಅಧ್ಯಕ್ಷ ವಿಜಯಕುಮಾರ್, ಮುರುಳ್ಯ ಗ್ರಾ.ಪಂ. ಉಪಾಧ್ಯಕ್ಷೆ ಜಾನಕಿ ಮುರುಳ್ಯ, ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಅಧ್ಯಕ್ಷ ಧನಂಜಯ ಕುಮಾರ್, ಜಾಲ್ಸೂರು ಗ್ರಾ.ಪಂ. ಉಪಾಧ್ಯಕ್ಷೆ ತಿರುಮಲೇಶ್ವರಿ ಅರ್ಭಡ್ಕ , ಕನಕಮಜಲು ಗ್ರಾ.ಪಂ. ಉಪಾಧ್ಯಕ್ಷ ರವಿಚಂದ್ರ ಕಾಪಿಲ ಆಯ್ಕೆಯಾಗಿದ್ದಾರೆ ಸದಸ್ಯರುಗಳಾಗಿ
ಕಳಂಜ ಗ್ರಾ.ಪಂ. ಉಪಾಧ್ಯಕ್ಷೆ ಪ್ರೇಮಲತಾ, ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಪಾವನ ಕೆ. ಉಬರಡ್ಕ ಮಿತ್ತೂರು ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ಸೂಂತೋಡು, ಮರ್ಕಂಜ ಗ್ರಾ.ಪಂ. ಅಧ್ಯಕ್ಷೆ ಗೀತಾ ಎಚ್.ಎಂ., ಪಂಜ ಗ್ರಾ.ಪಂ. ಅಧ್ಯಕ್ಷೆ ವಿಜಯಲಕ್ಷ್ಮಿ, ಅಮರ ಮುಡ್ನೂರು ಗ್ರಾ.ಪಂ. ಅಧ್ಯಕ್ಷೆ ಭುವನೇಶ್ವರಿ ಸಿ.ಎಸ್., ಮಂಡೆಕೋಲು ಗ್ರಾ.ಪಂ. ಉಪಾಧ್ಯಕ್ಷೆ ಪ್ರತಿಮಾ ಹೆಬ್ಬಾರ್, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ನಮಿತಾ ಎಲ್. ರೈ, ಗುತ್ತಿಗಾರು ಗ್ರಾ.ಪಂ. ಶ್ರೀಮತಿ ಸುಮಿತ್ರ ಮೂಕಮಲೆ, ಪೆರುವಾಜೆ ಗ್ರಾ.ಪಂ. ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಕೊಲ್ಲಮೊಗ್ರ ಗ್ರಾ.ಪಂ. ಅಧ್ಯಕ್ಷೆ ಜಯಶ್ರೀ ಚಾಂತಾಳ ಆಯ್ಕೆಯಾಗಿದ್ದಾರೆ.
ಖಾಯಂ ಆಹ್ವಾನಿತರುಗಳಾಗಿ ದೇವಚಳ್ಳ ಗ್ರಾ.ಪಂ. ಉಪಾಧ್ಯಕ್ಷೆ ಲೀಲಾವತಿ ಡಿ., ಮರ್ಕಂಜ ಗ್ರಾ.ಪಂ. ಉಪಾಧ್ಯಕ್ಷೆ ಸಂಧ್ಯಾ ಪಿ.ಈ., ಅರಂತೋಡು ಗ್ರಾ.ಪಂ. ಉಪಾಧ್ಯಕ್ಷೆ ಭವಾನಿ ಸಿ.ಎ., ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಸುಮತಿ ಶಕ್ತಿವೇಲು, ಕೊಡಿಯಾಲ ಗ್ರಾ.ಪಂ. ಉಪಾಧ್ಯಕ್ಷೆ ಚಿತ್ರ, ಐವರ್ನಾಡು ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ ಕುತ್ಲಾಡಿ, ಕಳಂಜ ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಕೆ., ಮುರುಳ್ಯ ಗ್ರಾ.ಪಂ. ಅಧ್ಯಕ್ಷೆ ವನಿತಾ ಬಿ., ಅಮರ ಮುಡ್ನೂರು ಗ್ರಾ.ಪಂ. ಉಪಾಧ್ಯಕ್ಷೆ ಜಾನಕಿ, ಕನಕಮಜಲು ಗ್ರಾ.ಪಂ. ಅಧ್ಯಕ್ಷೆ ಶಾರದಾ ಉಗ್ಗಮೂಲೆ, ಪೆರುವಾಜೆ ಗ್ರಾ.ಪಂ. ಉಪಾಧ್ಯಕ್ಷೆ ಶಾಹಿನಾಜ್, ಕಲ್ಮಡ್ಕ ಗ್ರಾ.ಪಂ. ಉಪಾಧ್ಯಕ್ಷೆ ಮೋಹಿನಿ ಎಂ., ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಉಪಾಧ್ಯಕ್ಷೆ ವಂದನಾ ಹೊಸತೋಟ, ಮಂಡೆಕೋಲು ಗ್ರಾ.ಪಂ. ಅಧ್ಯಕ್ಷ ಕೆ.ಯು. ಕುಶಲ, ಆಲೆಟ್ಟಿ ಗ್ರಾ.ಪಂ. ಉಪಾಧ್ಯಕ್ಷೆ ಕಮಲ, ಉಬರಡ್ಕ ಮಿತ್ತೂರು ಗ್ರಾ.ಪಂ. ಉಪಾಧ್ಯಕ್ಷೆ ಚಿತ್ರಕುಮಾರಿ, ಬೆಳ್ಳಾರೆ ಗ್ರಾ.ಪಂ. ಉಪಾಧ್ಯಕ್ಷೆ ವೀಣಾ , ಬಾಳಿಲ ಗ್ರಾ.ಪಂ. ಉಪಾಧ್ಯಕ್ಷ ರಮೇಶ್ ರೈ ಅಗಲ್ಪಾಡಿ, ಗುತ್ತಿಗಾರು ಗ್ರಾ.ಪಂ. ಉಪಾಧ್ಯಕ್ಷೆ ಭಾರತಿ, ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಬೇಬಿ, ಕೊಲ್ಲಮೊಗ್ರ ಗ್ರಾ.ಪಂ. ಉಪಾಧ್ಯಕ್ಷ ಅಶ್ವಥ್ ಯಾಳದಾಲ, ಹರಿಹರ ಪಲ್ಲತ್ತಡ್ಕ ಗ್ರಾ.ಪಂ. ಉಪಾಧ್ಯಕ್ಷ ಜಯಂತ ಬಾಳುಗೋಡು, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ತಿರುಮಲೇಶ್ವರಿ ಮರಸಂಕ, ಮಡಪ್ಪಾಡಿ ಗ್ರಾ.ಪಂ. ಉಪಾಧ್ಯಕ್ಷೆ ಸುಜಾತ ಹೆಚ್. ಆಯ್ಕೆಯಾಗಿದ್ದಾರೆ.









