ಸುಳ್ಯ :ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯಡಿ ( NPEP) ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಪಾತ್ರಾಭಿನಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಸುಳ್ಯಕ್ಕೆ ಆಗಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಿ ವಾಹನ ಮೆರವಣಿಗೆ ಮೂಲಕ ಕರೆ ತರಲಾಯಿತು.ಸಮೂಹ ಮಾಧ್ಯಮಗಳ
ಸುರಕ್ಷಿತ ಬಳಕೆ ಎಂಬ ವಿಷಯದ ಮೇಲೆ ಆಂಗ್ಲ ಭಾಷೆಯಲ್ಲಿ ಪ್ರಸ್ತುತ ಪಡೆಸಿದ ಪಾತ್ರಾಭಿನಯವನ್ನು ಸಂಸ್ಥೆಯ ಉಪಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ ಇವರು ರಚಿಸಿ ನಿರ್ದೇಶನ ಮಾಡಿದ್ದರು. ಒಂಭತ್ತನೇ ತರಗತಿ ವಿದ್ಯಾರ್ಥಿಗಳಾದ ಪೌರ್ಣಮಿ ಕೆ, ಹಿಮಾದ್ರಿ ಸಿ.ಎಮ್., ತನ್ವಿ ಕೆ.ಟಿ., ಅಶ್ವಿತಾ ಎಂ.ಡಿ., ಗಹನಾ ಎಸ್. ಇವರನ್ನೊಳಗೊಂಡ ವಿಜೇತ ತಂಡದ ಮಾರ್ಗದರ್ಶಕರಾಗಿ ಸಮಾಜವಿಜ್ಞಾನ ಶಿಕ್ಷಕರಾದ ಪೂರ್ಣಿಮಾ ಟಿ ಹಾಗು ಗಣಿತ ಶಿಕ್ಷಕರಾದ ಲತಾ ವೆಂಕಟೇಶ ಪೈ ಭಾಗವಹಿಸಿದ್ದರು. ಸುಳ್ಯಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಪದ್ಮಶ್ರೀ ಪುತಸ್ಕೃತ ಗಿರೀಶ್ ಭಾರದ್ವಾಜ್, ತಹಶೀಲ್ದಾರ್ ಮಂಜುಳಾ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಸದಸ್ಯ ಡೇವಿಡ್ ಧೀರ ಕ್ರಾಸ್ತ, ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ., ನ.ಪಂ. ಮುಖ್ಯಾಧಿಕಾರಿ ಸುಧಾಕರ ಎಂ.ಹೆಚ್., ಜನಾರ್ದನ ಮಾಸ್ಟರ್ ಗಣಿತ ಅಧ್ಯಯನ ಕೇಂದ್ರದ ಅಧ್ಯಕ್ಷ ಎಂ.ಬಿ.ಸದಾಶಿವ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಕೋಶಾಧಿಕಾರಿ ರಾಮಚಂದ್ರ ಪಲ್ಲತಡ್ಕ, ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ, ಶಿವಪ್ರಸಾದ್ ಅಲೆಟ್ಟಿ ಹಿರಿಯರಾದ ಬಾಪು ಸಾಹೇಬ್, ಎಸ್.ಡಿ.ಎಂ.ಸಿ.ಸದಸ್ಯರು, ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಸಿಆರ್ ಪಿ ಮಮತಾ ಪಡ್ಡಂಬೈಲು, ಶಿಕ್ಷಕ ಚಿನ್ನಪ್ಪ ಮಾಸ್ಟರ್, ನಟರಾಜ್ ಎಂ.ಎಸ್., ಯೂಸುಫ್ ಅಡ್ಕ ಮೊದಲಾದವರಿದ್ದರು.
ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯ ಸ್ವಾಗತಿಸಿದರು.ಬಳಿಕ ಕಾಲೇಜಿನವರೆಗೆ ಅದ್ದೂರಿ ಮೆರವಣಿಗೆ ನಡೆಯಿತು.ಸುಳ್ಯ ನಗರ ಪಂಚಾಯತ್ ಎದುರು ಪಂಚಾಯತ್ ವತಿಯಿಂದ ವಿಜೇತ ತಂಡವನ್ನು ಅಭಿನಂದಿಸಲಾಯಿತು.
ಕಾಲೇಜಿಗೆ ತಲುಪಿದ ಮೇಲೆ ಅಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ವಿಜೇತ ತಂಡವನ್ನು ಗೌರವಿಸಲಾಯಿತು.