ಮೈಸೂರು:ವಿಧಾನಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 2ನೇ ಸುತ್ತಿನಲ್ಲಿ ಬಿಜೆಪಿಯ ಧನಂಜಯ ಸರ್ಜಿ 14,077 ಮತಗಳನ್ನು ಗಳಿಸಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.ಅವರು 14,077 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ನ
14,077 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ನ ಆಯನೂರು ಮಂಜುನಾಥ್ 5,250 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ರಘುಪತಿ ಭಟ್ 5,091 ಮತಗಳನ್ನು ತೆಗೆದುಕೊಂಡಿದ್ದಾರೆ. ಎಸ್.ಪಿ. ದಿನೇಶ್ 1,285 ಮತಗಳನ್ನು ಪಡೆದಿದ್ದಾರೆ.ಈವರೆಗೆ ಒಟ್ಟು 28ಸಾವಿರ ಮತಗಳ ಎಣಿಕೆ ಪ್ರಕ್ರಿಯೆ ಮುಗಿದಿದೆ.