ಸುಳ್ಯ: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ೨೦೨೨-೨೩ನೇ ಸಾಲಿನಲ್ಲಿ ಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರಧಾನ ಕಾರ್ಯಕ್ರಮ ಜೂ.24 ರಂದು ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ
ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯದ ಉಪಕುಲಪತಿ ಡಾ. ವಿದ್ಯಾಶಂಕರ್ ಎಸ್., ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯದ ರಿಜಿಸ್ಟ್ರಾರ್ ಡಾ. ಬಿ.ಇ. ರಂಗಸ್ವಾಮಿ, ಕೇರಳ ಕನಯನ್ನೂರ್ನ ಅಗಪ್ಪೆ ಡಯಗ್ನೋಸ್ಟಿಕ್ ಲಿಮಿಟೆಡ್ನ ಮ್ಯಾನೇಜಿಂಗ್ ಡಯರಕಟರ್ ಥೋಮಸ್ ಜಾನ್, ಭಾಗವಹಿಸಲಿದ್ದಾರೆಮ ಈ ಸಮಾರಂಭದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ಸುಮಾರು ೩೦೦ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇದರ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾದ
ಡಾ. ರೇಣುಕಾಪ್ರಸಾದ್ ಕೆ. ವಿ., ಕಾಲೇಜಿನ ಸಿ.ಇ.ಒ., ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲ ಡಾ. ಸುರೇಶ ವಿ., ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ