ಜಾಲ್ಸೂರು:ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಕಾರು ನರೇಗಾ ಕಾಮಗಾರಿ ಸ್ಥಳದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೂಲಿಕಾರರ ಆರೋಗ್ಯ ತಪಾಸಣೆಗಾಗಿ ಗ್ರಾಮ ಆರೋಗ್ಯ ಕಾರ್ಯಕ್ರಮ ನಡೆಯಿತು. ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ
ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ನಂದಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಆರೋಗ್ಯ ಮಾಹಿತಿ ನೀಡಿದರು. ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಬು ಕೆ.ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಜಾಲ್ಸೂರು ಗ್ರಾ.ಪಂ ಉಪಾಧ್ಯಕ್ಷೆ ಲೀಲಾವತಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ತಾಲೂಕು ಎನ್ ಆರ್ ಎಲ್ ಎಂ ವ್ಯವಸ್ಥಾಪಕರಾದ ಶ್ವೇತಾ ವೇದಿಕೆಯಲ್ಲಿದ್ದರು. ಗ್ರಾ.ಪಂ ಕಾರ್ಯದರ್ಶಿಗಳು, ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನದ ತಾಲೂಕು ಸಂಯೋಜನಕರು, ತಾಲೂಕು ಮಾಹಿತಿ ಶಿಕ್ಷಣ ಸಂವಹನ ಸಂಯೋಜಕಿ ನಮಿತಾ, ಗ್ರಾಮ ಪಂಚಾಯತ್ ಸಿಬ್ಬಂದಿವರ್ಗ, ನರೇಗಾ ಕೂಲಿಕಾರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.