ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ ಪಂಚಾಯತ್, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಪಂಚಾಯತ್, ಹರಿಹರ ಗ್ರಾಮ ಪಂಚಾಯತ್, ಕೊಲ್ಲ ಮೊಗರು ಗ್ರಾಮ ಪಂಚಾಯತ್,ವಿಜಯ ಗ್ರಾಮೀಣಾ ಭಿವೃದ್ಧಿ ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ.
ಪತ್ರಕರ್ತರ 5ನೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಫೆ.10ರಂದು ಬೆಳಗ್ಗೆ
9ರಿಂದ ಕೊಲ್ಲಮೊಗರು ಸರಕಾರಿ ಶಾಲೆ ಬಂಗ್ಲೆಗುಡ್ಡೆಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಗ್ರಾಮ ವಾಸ್ತವ್ಯಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ. ತಹಶೀಲ್ದಾರ್ ಜಿ.ಮಂಜುನಾಥ್ ಅವರು ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿಸರು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಗ್ರಾಮ ವಾಸ್ತವ್ಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಉದ್ಘಾಟಿಸುವರು. ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟನೆಯನ್ನು ಆರೋಗ್ಯ ಸಚಿವರು, ಹಾಗೂದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವರಾದವ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದಾರೆ.
ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಗ್ರಾಮಗಳಿಗೆ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆ ಗಾರರಾದ ಕೆ ವಿ ಪ್ರಭಾಕರ್, ಕಾರ್ಯಕ್ರಮಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡುವರು. ಸ್ವಸಹಾಯ ಗುಂಪುಗಳ ಉತ್ಪಾದನೆಗಳ ಮಾರಾಟ ಮಳಿಗೆಗಳ ಉದ್ಘಾಟನೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಿವಿಧ ಸರಕಾರಿ ಇಲಾಖೆಗಳ ಮಾಹಿತಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲನೆ ನೀಡುವರು.
ಪೂ. 10.30 ರಿಂದ 1 ಗಂಟೆವರೆಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಗಳೊಂದಿಗೆ ನೇರ ಸಂವಾದ ನಡೆಯಲಿದೆ.
ಅ. ಒಂದು ಗಂಟೆ ಯಿಂದ 2 ಗಂಟೆಯವರಿಗೆ ಭೋಜನ ವಿರಾಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅ.2 ಗಂಟೆ ಯಿಂದ 3 ಗಂಟೆವರೆಗೆ ರೈತರಿಗೆ ಅಡಿಕೆ ಬೆಳೆಗೆ ಹಳದಿ ರೋಗ ಹಾಗೂ ಎಲ್ಲೆ ಚುಕ್ಕಿ ರೋಗದ ಬಗೆ ತಜ್ಞರಿಂದ ಮಾಹಿತಿ ಕಾರ್ಯಕ್ರಮ. 3 ಗಂಟೆ ಯಿಂದ 4 ಗಂಟೆವರೆಗೆ
ರೈತರಿಗೆ ಹೈನುಗಾರಿಕೆ ಹಾಗೂ ಜೇನು ಕೃಷಿ ಕುರಿತು ಮಾಹಿತಿ ಕಾರ್ಯಗಾರ, 4 ಗಂಟೆಯಿಂದ 4.30 ವರೆಗೆ ಸ್ವಚ್ಛ ಗ್ರಾಮ ಸ್ವಚ್ಛ ಪರಿಸರ -ಪ್ಲಾಸ್ಟಿಕ್ ತ್ಯಾಜ್ಯ ವಿರುದ್ಧ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಲಿದೆ.
4.30ರಿಂದ ಸಮಾರೋಪ ಸಮಾರಂಭ ನಡೆಯಲಿದೆ. ವಿಧಾನ ಪರಿಷತ್ತಿನ ವಿರೋಧ ಪಕ್ಷದ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸಮಾರೋಪ ಭಾಷಣ ಮಾಡುವರು. ಸಂಜೆ 5 ರಿಂದ 7 ಗಂಟೆ ವರೆಗೆ
ಗ್ರಾಮದ ವಿವಿಧ ಪ್ರದೇಶಗಳಿಗೆ ಪತ್ರಕರ್ತರ ಭೇಟಿ ಸಂಜೆ 7 ಗಂಟೆ ಯಿಂದ 8ಗಂಟೆವರೆಗೆ ಗ್ರಾಮದ ಹಿರಿಯರ ಅನುಭವ ವಿನಿಮಯ ಚಾವಡಿ ಚರ್ಚೆ ಪತ್ರಕರ್ತರೊಂದಿಗೆ.
ರಾತ್ರಿ 8 ಗಂಟೆಯಿಂದ ಪತ್ರಕರ್ತರ ಗ್ರಾಮ ವಾಸ್ತವ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.