ದೇವಚಳ್ಳ: ದೇವಚಳ್ಳ ಯುವಕ ಮಂಡಲಬಶೃತಿ ಯುವತಿ ಮಂಡಲ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂದ್ರಪ್ಪಾಡಿ ಮತ್ತು ಅಂಗನವಾಡಿ ಕೇಂದ್ರ ಕಂದ್ರಪ್ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ
ದೀಪಾವಳಿ ಪ್ರಯುಕ್ತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂದ್ರಪ್ಪಾಡಿಯಲ್ಲಿ ನಡೆದ ಗ್ರಾಮೀಣ ಕ್ರೀಡಾಕೂಟವನ್ನು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಉದ್ಘಾಟಿಸಿದರು. ಗುತ್ತಿಗಾರು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು, ದೇವಚಳ್ಳ ಗ್ರಾ.ಪಂ.ಅಧ್ಯಕ್ಷೆ ಸುಲೋಚನ ದೇವ, ಕಂದ್ರಪ್ಪಾಡಿ ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಾಣಿ ಪೊಯ್ಯೆಮಜಲು,ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಚಂದ್ರಶೇಖರ, ಯುವಕ ಮಂಡಲದ ಅಧ್ಯಕ್ಷರಾದ ವಿನಯಕುಮಾರ್ ಮುಳುಗಾಡು,ಶೃತಿ ಯುವತಿ ಮಂಡಲದ ಅಧ್ಯಕ್ಷೆ ರೇಖಾ ಕಂದ್ರಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.