ಬಳ್ಪ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಆದರ್ಶ ಗ್ರಾಮವಾಗಿ ಆಯ್ಕೆ ಮಾಡಿದ ಬಳ್ಪ ಗ್ರಾಮದಲ್ಲಿ ಗ್ರಾಮೋತ್ಸವ ಸಂಭ್ರಮ ನಡೆಯುತಿದೆ. ಗ್ರಾಮ ವಿಕಾಸ ಪ್ರತಿಷ್ಠಾನ ಬಳ್ಪ – ಕೇನ್ಯ, ಗ್ರಾಮ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ಬಳ್ಪ ಸ.ಹಿ.ಪ್ರಾ. ಶಾಲಾ ಆವರಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಗ್ರಾಮೋತ್ಸವ ನಡೆಯುತ್ತಿದೆ. ಗ್ರಾಮೋತ್ಸವದ ಅಂಗವಾಗಿ ಸಂಜೆ ಭಜನಾ ಸಂಕೀರ್ತನ ಯಾತ್ರೆ ನಡೆಯಿತು. ಭಜನಾ ಸಂಕೀರ್ತನಾ ಮೆರವಣಿಗೆಯನ್ನು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ದೀಪ ಬೆಳಗಿಸಿ

ಉದ್ಘಾಟಿಸಿದರು. ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮತ್ತು ರಾಸಾಯನಿಕೆಗಳು ಮತ್ತು ರಸಗೊಬ್ಬರಗಳ ಸಚಿವಾಲಯದ ರಾಜ್ಯ ಸಚಿವರಾದ ಭಗವಂತ್ ಖೂಬಾ, ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಸಚಿವ ಎಸ್. ಅಂಗಾರ,ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ರಾಮ್ ಸುಳ್ಳಿ. ಬಳ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ಹರ್ಷಿತ್ ಕಾರ್ಜ, ಬಲ್ಪ-ಕೇನ್ಯ ಗ್ರಾಮ ವಿಕಾಸ ಪ್ರತಿಷ್ಠಾನದ ಅಧ್ಯಕ್ಷ ವಿನೋದ್ ಬೊಳ್ಮಲೆ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತಿತರರು ಉಪಸ್ಥಿತರಿದ್ದರು.










