ಸುಳ್ಯ :ಮಕ್ಕಳ ದಿನಾಚರಣೆ, ಅಂಗವಾಗಿ ಬ್ಯಾಂಕ್ ಆಫ್ ಬರೋಡಾ ಸುಳ್ಯ ಶಾಖೆ ವತಿಯಿಂದ ಗ್ರೀನ್ ವ್ಯೂ ಶಾಲೆಯ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ
ಸಿಹಿ ತಿಂಡಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ ಸುಳ್ಯ ಬ್ಯಾಂಕ್ ಮ್ಯಾನೇಜರ್ ವಿಜಯ್ ವಿದ್ಯಾರ್ಥಿಗಳಿಗೆ ಹಿತನುಡಿ ಮತ್ತು ಬ್ಯಾಂಕ್ ಖಾತೆಯ ಬಗ್ಗೆ ಮಾಹಿತಿ ನೀಡಿದರು ಹಾಗೂ ಸಿಬ್ಬಂದಿ ವರ್ಗ, ಉಪಸ್ಥಿತರಿದ್ದರು. ಗ್ರೀನ್ ವ್ಯೂ ಆಡಳಿತ ಮಂಡಳಿ ಸದಸ್ಯ ಎಸ್ ಎಂ. ಹಮೀದ್, ಮುಖ್ಯ ಶಿಕ್ಷಕ ಇಲ್ಯಾಸ್ ಅಹಮ್ಮದ್ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು ಶಿಕ್ಷಕ ರಂಜಿತ್ ಸ್ವಾಗತಿಸಿ ,ಮಂಜುನಾಥ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿ ಅಶ್ವಿನಿ ವಂದಿಸಿದರು.