ಸುಳ್ಯ: ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಗ್ರೀನ್ ವ್ಯೂ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್ ಅಧ್ಯಕ್ಷತೆ ವಹಿಸಿದ್ದರು.ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು 100% ಫಲಿತಾಂಶ ತರುವಲ್ಲಿ ಸಹಕರಿಸಿದ ಶಿಕ್ಷಕರುಗೂ,ವಿದ್ಯಾರ್ಥಿಗಳಿಗೂ ಅಭಿನಂದನೆ ಸಲ್ಲಿಸಲಾಯಿತು.
ಶಾಲಾ ಅಡಳಿತ ಸಮಿತಿ ಸದಸ್ಯರಾದ ಉಮ್ಮರ್ ಕೆ ಎಸ್, ಶಾಫಿ ಕುತ್ತಮೊಟ್ಟೆ ಶುಭ ಹಾರೈಸಿದರು.ಶಾಲಾ ಸಂಚಾಲಕ ಹಾಜಿ ಅಬ್ದುಲ್ ಹಮೀದ್ ಎಸ್ ಎಂ,ಅಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಲತೀಫ್ ಹರ್ಲಡ್ಕ, ನಿರ್ದೇಶಕ ಶಾಲಿ ಕಟ್ಟೆಕ್ಕಾರ್ ಉಪಸ್ಥಿತರಿದ್ದರು.
ಗ್ರೀನ್ ವ್ಯೂ ಶಾಲೆ ಮುಖ್ಯ ಶಿಕ್ಷಕ ಇಲ್ಯಾಸ್ ಕಾಶಿಪಟ್ನ ಸ್ವಾಗತಿಸಿದರು
ಶಿಕ್ಷಕ ಮಂಜುನಾಥ್, ರಕ್ಷಿತ್ ಕಾರ್ಯಕ್ರಮ ನಿರೂಪಿಸಿ ಶಿಕ್ಷಕಿ ಉಷಾ ಧನ್ಯವಾದ ಸಮರ್ಪಿಸಿದರು.