ಬೆಂಗಳೂರು:ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ದಾಖಲಾತಿ ಪರಿಶೀಲನೆಯ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ
ಇದುವರೆಗೆ ಸರಾಸರಿ ಶೇ 62ರಷ್ಟು ಫಲಾನುಭವಿಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದೆ. ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ
ಕಾಲಾವಕಾಶ ಬೇಕು ಎಂದು ವಿದ್ಯುತ್ ಸರಬರಾಜು ಕಂಪನಿಗಳು ಮನವಿ ಸಲ್ಲಿಸಿದ್ದವು. ಹೀಗಾಗಿ, ಅವಧಿ ವಿಸ್ತರಿಸಲಾಗಿದೆ ಎಂದು ಇಂಧನ ಇಲಾಖೆ ತನ್ನ ಆದೇಶದಲ್ಲಿ ಹೇಳಿದೆ.ಈ ಮುಂಚೆ ನೀಡಿದ್ದ ಗಡುವು ಪ್ರಕಾರ ಆಗಸ್ಟ್ 31ಕ್ಕೆ ಈ ಪ್ರಕ್ರಿಯೆ ಮುಗಿಯಬೇಕಿತ್ತು. ಆದರೆ, ಹಲವು ಕಾರಣಗಳಿಂದಾಗಿ ದಾಖಲಾತಿ ಪರಿಶೀಲನೆ ತಡವಾಗಿರುವುದರಿಂದ, ಇನ್ನೂ ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ.












