ಬೆಂಗಳೂರು: ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಉಚಿತ ವಿದ್ಯುತ್ ಪೂರೈಸಲಾಗುವುದು. ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಆವರಣದಲ್ಲಿ ಮಂಗಳವಾರ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಬಾಡಿಗೆ ಮನೆಯಲ್ಲಿ ವಾಸಿಸುವವರು ಬಹುತೇಕ
ಬಡವರಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲಾಗುವುದು. ವಾಣಿಜ್ಯ ಉದ್ದೇಶದ ಬಾಡಿಗೆ ಹೊರತುಪಡಿಸಿ ಎಲ್ಲ ಬಾಡಿಗೆ ಗೃಹಗಳಿಗೂ ಉಚಿತ ವಿದ್ಯುತ್ ದೊರೆಯಲಿದೆ ಎಂದರು.
ರಾಜ್ಯ ಸರಕಾರದ ಗೃಹಜ್ಯೋತಿ ಯೋಜನೆ ಜಾರಿ ವಿಚಾರವಾಗಿ ಜನರಲ್ಲಿ ಸಾಕಷ್ಟು ಗೊಂದಲ ಮೂಡಿದೆ. ಈ ಕುರಿತು ರಾಜ್ಯ ಕಾಂಗ್ರೆಸ್ ಕೂಡ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ. ‘ನಮ್ಮ ಗ್ಯಾರಂಟಿ ಯೋಜನೆಗಳು ಸಮಾಜ ಕಲ್ಯಾಣದ ಕಾರ್ಯಕ್ರಮಗಳಾಗಿವೆ. ಗೃಹಜ್ಯೋತಿ ಯೋಜನೆಯು ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಅನ್ವಯವಾಗಲಿದೆ’ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.ಬಾಡಿಗೆ ಮನೆಯ ವಾಸಿಗಳು ಈ ಕೆಳಕಂಡ ಮಾರ್ಗಸೂಚಿಯನ್ನು ಅನುಸರಿಸಿ ಯೋಜನೆಯ ಪ್ರಯೋಜನ ಪಡೆಯಬಹುದು” ಎಂದು ತಿಳಿಸಿದೆ.
ಕಾಂಗ್ರೆಸ್ ಟ್ವಿಟರ್ ನಲ್ಲಿ ಪ್ರಕಟಿಸಿರುವ ಮಾರ್ಗಸೂಚಿ ಹೀಗಿದೆ.