ಬೆಂಗಳೂರು:ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲ ಎಸ್ಕಾಂಗಳ ಸಿಬ್ಬಂದಿ ಜುಲೈ 1ರಿಂದ ಕೈಗೊಳ್ಳಲಿದ್ದಾರೆ.2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ
ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ಗಳು ಹಾಗೂ ಎಸ್ಕಾಂ ಸಿಬ್ಬಂದಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ, ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆ್ಯಪ್ ಹಾಗೂ ಘೋಷಣಾ ಪತ್ರ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆ ಪೂರ್ಣಗೊಳಿಸಲಿದ್ದಾರೆ.
ಮನೆ ಭೇಟಿ ಸಂದರ್ಭದಲ್ಲಿ ಆಧಾರ್ ಕಾರ್ಡ್, ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ), ಪಡಿತರ ಚೀಟಿ ಹಾಗೂ ಜಾತಿ ಪ್ರಮಾಣ ಪತ್ರ ವನ್ನು ತೋರಿಸಲು ಕೋರಲಾಗಿದೆ.






