ಸುಳ್ಯ: ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ರಾಜ್ಯದಾದ್ಯಂತ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ನಡೆದ ಕಾರ್ಯಕ್ರಮವನ್ನು ರಾಜ್ಯದ ವಿವಿಧ ಕಡೆ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪರದೆಯ ಮೂಲಕ ವೀಕ್ಷಣೆ ಮಾಡಲಾಯಿತು. ಸುಳ್ಯ ತಾಲೂಕಿನಲ್ಲಿ ನಗರ ಪಂಚಾಯತ್ ವತಿಯುಂದ ಹಾಗೂ ಗ್ರಾಮ ಪಂಚಾಯತ್ಗಳಲ್ಲಿ ಕಾರ್ಯಕ್ರಮ ನಡೆಯಿತು. ಸುಳ್ಯ ತಾಲೂಕಿನಲ್ಲಿ
27,635 ಪಡಿತರ ಚೀಟಿಗಳ ಪೈಕಿ 21,852 ಮಂದಿ ಅಂದರೆ ಶೇ.79 ನೋಂದಣಿ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ 23,918 ಪಡಿತರ ಚೀಟಿಗಳಲ್ಲಿ 19,122 ಮಂದಿ ಅಂದರೆ ಶೇ.80 ಮಂದಿ, ನಗರ ವ್ಯಾಪ್ತಿಯಲ್ಲಿ3,717 ಪಡಿತರ ಚೀಟಿಯಲ್ಲಿ 2730 ಅಂದರೆ ಶೇ.73 ಮಂದಿ ನೋಂದಣಿ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸುಳ್ಯ ನಗರ ಪಂಚಾಯತ್ ಸಹಯೋಗದಲ್ಲಿ ಲಯನ್ಸ್ ಕ್ಲಬ್ನಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ ನಡೆಯಿತು.
ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು, ಅಧಿಕಾರಿಗಳು, ಫಲಾನುಭವಿಗಳು ಭಾಗವಹಿಸಿ ಕಾರ್ಯಕ್ರಮ ವೀಕ್ಷಿಸಿದರು.
ತಹಶೀಲ್ದಾರ್ ಎಂ.ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಹೆಚ್.ಎಂ,ಸಿಡಿಪಿಒ ಶೈಲಜಾ ದಿನೇಶ್ ಕುಕ್ಕುಜಡ್ಕ,
ನಗರ ಪಂಚಾಯತ್ ಸದಸ್ಯರಾದ ವೆಂಕಪ್ಪ ಗೌಡ, ಬಾಲಕೃಷ್ಣ ಭಟ್ ಕೊಡಂಕೇರಿ, ಬುದ್ಧ ನಾಯ್ಕ್, ಸುಧಾಕರ ಕುರುಂಜಿಗುಡ್ಡೆ, ಶರೀಫ್ ಕಂಠಿ, ಡೇವಿಡ್ ಧೀರ ಕ್ರಾಸ್ತಾ, ಕೆ.ಎಸ್.ಉಮ್ಮರ್, ರಿಯಾಜ್ ಕಟ್ಟೆಕ್ಕಾರ್, ಶಿಲ್ಪಾ ಸುದೇವ್, ನಾರಾಯಣ ಶಾಂತಿನಗರ, ಶೀಲಾ ಅರುಣ ಕುರುಂಜಿ, ಕಿಶೋರಿ ಶೇಟ್,ಶಶಿಕಲಾ ನೀಬಿದಿರೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಡಿಸಿಸಿ ಉಪಾಧ್ಯಕ್ಷ ಎನ್ ಜಯಪ್ರಕಾಶ್ ರೈ, ಕೆಪಿಸಿಸಿ ಸಂಯೋಜಕ ಎಸ್. ಶಂಸುದ್ದೀನ್, ಕೆಪಿಸಿಸಿ ಅಲ್ಪ ಸಂಖ್ಯಾತರ ವಿಭಾಗದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ, ಕಾಂಗ್ರೆಸ್ ಮುಖಂಡರಾದ
ಕೆ.ಗೋಕುಲ್ದಾಸ್, ಭವಾನಿ ಶಂಕರ ಕಲ್ಮಡ್ಜ, ಶಶಿಧರ ಎಂ ಜೆ, ಶಾಫಿ ಕುತ್ತಮೊಟ್ಟೆ , ಶಹೀದ್ ಪಾರೆ, ಇಬ್ರಾಹಿಂ ಕತ್ತರ್, ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಆಗಮಿಸಿದ ಫಲಾನುಭವಿಗಳಿಗೆ ಪಾನೀಯ, ಗಂಜಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಚಾಲನೆ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಲಾಯಿತು.