ಬೆಂಗಳೂರು: ರಾಜ್ಯ ಸರ್ಕಾರ ನೀಡುವ ‘ಗೃಹಲಕ್ಷ್ಮಿ ಯೋಜನೆ’ಯ ಅರ್ಹ ಮಹಿಳೆಯರು ನಾಳೆಯಿಂದಲೇ (ಜೂನ್ 16 ರಿಂದ) ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಈ ಯೋಜನೆಯು ಪ್ರತಿ ಕುಟುಂಬದ ಯಜಮಾನಿ ಬ್ಯಾಂಕ್ ಖಾತೆಗೆ
ಮಾಸಿಕ 2,000 ಗಳನ್ನು ನೇರವಾಗಿ ಜಮಾ ಮಾಡಲಿದೆ.
ಅರ್ಜಿಗಳನ್ನು ಆನ್ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ ಬೆಂಗಳೂರು ಒನ್ ಇಲ್ಲವೇ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕು.ಈ ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.