ಬೆಳಗಾವಿ: ಗೃಹ ಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಅಕ್ಟೋಬರ್ನಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಅ.7 ಮತ್ತು 9 ರಂದು ಎರಡೂ ಕಂತಿನ
ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಲಿದೆ ಎಂದು ತಿಳಿಸಿದರು.ತಾಂತ್ರಿಕ ಕಾರಣದಿಂದ ಎರಡು ತಿಂಗಳ ಕಂತಿನ ಹಣ ತಡವಾಗಿತ್ತು. ಈ ತಿಂಗಳು ಜುಲೈ ಮತ್ತು ಆಗಸ್ಟ್ ಕಂತಿನ ಹಣ ಜಮೆಯಾಗಲಿದೆ ಎಂದು ಹೇಳಿದರು.ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಕಂತಿನ ಹಣ ಅಕ್ಟೋಬರ್ 7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ.