ಬೆಂಗಳೂರು::ರಾಜ್ಯ ಸರಕಾರದ ಮತ್ತೊಂದು ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಆ. 16 ರಿಂದ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ
ನೀಡಿ, ಮಾತನಾಡಿದ ಅವರು, ಆ. 16 ರಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬರಲಿದೆ ಎಂದರು. ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ ಖಾತೆಗೆ ಮಾಸಿಕ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುವುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 16 ರಿಂದ ಚಾಲನೆ ನೀಡಲಾಗುವುದು. ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆ ಜಾರಿಯಾಗಿದ್ದು 4ನೇ ಯೋಜನೆ ಗೃಹಲಕ್ಷ್ಮಿ ಜಾರಿಗೆ ಬರಲಿದೆ.