ಸುಳ್ಯ:ಗೃಹ ಲಕ್ಷ್ಮಿ ಯೋಜನೆ ಜಾರಿಯಾಗಿ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಮತ್ತು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ವತಿಯಿಂದ ಗೃಹಲಕ್ಷ್ಮಿ ಜಾಗೃತಿ ಕಾರ್ಯಕ್ರಮ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಯಿತು.ಪಂಚಾಯತ್ ಆವರಣದಲ್ಲಿ
ಗೃಹಲಕ್ಷ್ಮಿ ಪಲಾನುಭವಿಗಳ ಮೂಲಕ ಹಣ್ಣಿನ ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು.ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ಸಂಪನ್ಮೂಲ ವ್ಯಕ್ತಿ ಶಶಿಧರ ಎಂ ಜೆ ಮಾತನಾಡಿದರು. ಉಬರಡ್ಕ ಮಿತ್ತೂರು ನರಸಿಂಹ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಶಿವರಾಮ ಎಂ. ಪಿ, ಪಂಚಾಯತ್ ಮಾಜಿ ಉಪಾಧ್ಯಕ್ಷೆ ಚಿತ್ರಾವತಿ ಪಾಲಡ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ,ಪ್ರಮುಖರಾದ ಡೇವಿಡ್ ಧೀರಾ ಕ್ರಾಸ್ತ,ರಾಜು ಪಂಡಿತ್,ಆಶಿಕ್ ಅರಂತೋಡು, ಶುಭಕರ ಉಬರಡ್ಕ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.








